ನರಳುತ್ತಿದ್ದ ಗರ್ಭಿಣಿಗೆ ಆ್ಯಂಬುಲೆನ್ಸ್ ನಲ್ಲೇ ಹೆರಿಗೆ ಮಾಡಿಸಿದ ಸಿಬ್ಬಂದಿ

Published : Jul 01, 2019, 11:14 AM ISTUpdated : Jul 01, 2019, 11:23 AM IST
ನರಳುತ್ತಿದ್ದ ಗರ್ಭಿಣಿಗೆ ಆ್ಯಂಬುಲೆನ್ಸ್ ನಲ್ಲೇ ಹೆರಿಗೆ ಮಾಡಿಸಿದ ಸಿಬ್ಬಂದಿ

ಸಾರಾಂಶ

ಗಂಭೀರ ಸ್ಥಿತಿಯಲ್ಲಿ ಹೆರಿಗೆ ನೋವಿನಿಂದ ನರಳುತ್ತಿದ್ದ  ಗರ್ಭಿಣಿಗೆ ಆ್ಯಂಬುಲೆನ್ಸ್ ನಲ್ಲೇ ಸಿಬ್ಬಂದಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. 

ವಿಜಯಪುರ [ಜು.1] : ಗಂಭೀರ ಸ್ಥಿತಿಯಲ್ಲಿ ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಆಸ್ಪತ್ರೆಗೆ ಸಾಗಿಸುವ ವೇಳೆ ಆ್ಯಂಬುಲೆನ್ಸ್ ನಲ್ಲೆ ಹೆರಿಗೆಯಾದ ಘಟನೆ ವಿಜಯಪುರದಲ್ಲಿ ನಡೆದಿದೆ.  

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಕಾನ್ಯಾಳ ಗ್ರಾಮದ ರಮಿಜಾ ಜಾವೇದ್ ತಾಂಬೋಳಿ ಎಂಬ ಮಹಿಳೆಗೆ ತಾಲೂಕು ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮಗು ಜನಿಸಿದೆ. 

ಕಾನ್ಯಾಳ ಗ್ರಾಮದಿಂದ ಬಸವನ‌ ಬಾಗೇವಾಡಿ ತಾಲೂಕು ಆಸ್ಪತ್ರೆಗೆ 108 ಆಂಬುಲೆನ್ಸ್ ನಲ್ಲಿ ತರಲಾಗಿತ್ತು. ಈ ವೇಳೆ ಅವರನ್ನು ಪರೀಕ್ಷೆಗೆ ಒಳಪಡಿಸಿದ ಆಸ್ಪತ್ರೆ  ವೈದ್ಯರು ಬಿಪಿ ಹೆಚ್ಚಿರುವ ಕಾರಣ ಜಿಲ್ಲಾಸ್ಪತ್ರೆಗೆ ಸಾಗಿಸಲು ಸೂಚಿಸಿದ್ದರು.  ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಹೆರಿಗೆ ನೋವು ಜಾಸ್ತಿಯಾಗಿದ್ದು, 108 ಸಿಬ್ಬಂದಿಯೇ ಹೆರಿಗೆ ಮಾಡಿಸಿದರು. 

ಸುಸೂತ್ರವಾಗಿ ಹೆರಿಗೆಯಾಗಿದ್ದು, ಹರ್ಷಗೊಂಡ ಕುಟುಂಬಸ್ಥರು ಸಿಬ್ಬಂದಿಗೆ ಧನ್ಯವಾದ ತಿಳಿಸಿದರು. ಹೃದಯ ವೈಶಾಲ್ಯತೆ ಮರೆದ ವಿಜಯ್ ಕುಮಾರ್ ಲಿಂಗದಳ್ಳಿ, ವಿಜಯ್ ಗದ್ದನಕೇರಿ ಅವರನ್ನು ಮನದುಂಬಿ ಹರಸಿದರು. 

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ