ಕಾಫಿನಾಡಲ್ಲಿ ಕೆ.ಎಫ್.ಡಿ ಸೋಂಕಿಗೆ ಮತ್ತೊಂದು ಬಲಿ: ಸೌದೆ ತರಲು ಎಸ್ಟೇಟಿಗೆ ಹೋಗಿದ್ದೇ ತಪಾಯ್ತಾ?

By Govindaraj SFirst Published Feb 28, 2024, 10:03 PM IST
Highlights

ಮಂಗನಕಾಯಿಲೆ ಸೋಂಕು( ಕೆಎಫ್ ಡಿ) ತಗುಲಿ ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪ ತಾಲೂಕು ನುಗ್ಗಿ ಗ್ರಾಮ ದ ಕಾರ್ಮಿಕ ಮಹಿಳೆ ಕೊಟ್ರಮ್ಮ (43) ಕೆಎಫ್ ಡಿಗೆ ಬಲಿಯಾಗಿದ್ದಾರೆ. 

ಚಿಕ್ಕಮಗಳೂರು (ಫೆ.28): ಮಂಗನಕಾಯಿಲೆ ಸೋಂಕು( ಕೆಎಫ್ ಡಿ) ತಗುಲಿ ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪ ತಾಲೂಕು ನುಗ್ಗಿ ಗ್ರಾಮ ದ ಕಾರ್ಮಿಕ ಮಹಿಳೆ ಕೊಟ್ರಮ್ಮ (43) ಕೆಎಫ್ ಡಿಗೆ ಬಲಿಯಾಗಿದ್ದಾರೆ. ಮಹಿಳೆಯಲ್ಲಿ ತೀವ್ರ ಜ್ವರ, ಸುಸ್ತು, ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಿದಾಗ ಮಂಗನ ಕಾಯಿಲೆ ದೃಢಪಟ್ಟಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ದೇವಗನ್ ಎಸ್ಟೇಟ್ ನಲ್ಲಿ ಕಾರ್ಯನಿರ್ವಸುತ್ತಿದ್ದ  ಮಹಿಳೆ ಕಾಡಿಗೆ ಕಟ್ಟಿಗೆ ತರಲು ತೆರಳಿದ ವೇಳೆ ಉಣ್ಣೆ ಕಡಿತದಿಂದ ಕೆ ಎಫ್ ಡಿ ಬಂದಿರಬಹುದೆಂದು ಅಂದಾಜಿಸಲಾಗಿದೆ.

ಮಂಗನಕಾಯಿಲೆ ಉಲ್ಬಣಿಸುವ ಮುನ್ನ ಎಚ್ಚರ ವಹಿಸಿ: ಈ ವರ್ಷ ಲಸಿಕೆ ಕೂಡಾ ಇಲ್ಲದ ಕಾರಣ ಮಂಗನಕಾಯಿಲೆ ಯಾವುದೇ ಕ್ಷಣದಲ್ಲಿ ಉಲ್ಬಣಿಸುವ ಆತಂಕವಿದೆ. ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಮಾಹಿತಿ ಕೊರತೆಯಾಗದಂತೆ ಕೆಎಫ್‍ಡಿ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆ ಗಂಭೀರ ಎಚ್ಚರ ವಹಿಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಶನಿವಾರ ನಡೆದ ತ್ರೈಮಾಸಿಕ ಸಭೆಯ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ, ಈ ಸೋಂಕಿನ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ವ್ಯಾಕ್ಸಿನೇಶನ್ ನೀಡುವಲ್ಲಿಯೂ ಸರ್ಕಾರ ವಿಫಲವಾಗಿದೆ. 

ನಮ್ಮ ನಿಷ್ಠೆ ಎದೆ ಬಗೆದು ತೋರಿಸಲು ಆಗೋದಿಲ್ಲ: ಸಿ.ಟಿ.ರವಿ

ಆರೋಗ್ಯ ಇಲಾಖೆ ಮುಂಜಾಗರೂಕತೆಯಿಂದ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ರೋಗಿಗಳು ಶುಲ್ಕ ನೀಡಬೇಕಿಲ್ಲ ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ನಟರಾಜ್ ಸಭೆಗೆ ಮಾಹಿತಿ ನೀಡಿ, ತಾಲೂಕಿನಲ್ಲಿ ಈವರೆಗೆ 13 ಮಂಗನಕಾಯಿಲೆ ಪ್ರಕರಣ ದಾಖಲಾಗಿದೆ. ಇವರಲ್ಲಿ 8 ಮಂದಿ ಮಣಿಪಾಲದಲ್ಲಿ ಹಾಗೂ 5 ಜನರು ಜೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ದೂರದ ಊರಿನಿಂದ ಬಂದಿರುವ ಕಾರ್ಮಿಕರು ನಮ್ಮ ನಿಯಂತ್ರಣಕ್ಕೆ ಬರುತ್ತಿಲ್ಲ. ಅಂಥವರಲ್ಲೇ ಹೆಚ್ಚು ಪಾಸಿಟಿವ್ ಬಂದಿದೆ. ಕೊರೋನಾದ 5 ಪ್ರಕರಣಗಳು ಡಿಸೆಂಬರ್ ತಿಂಗಳಲ್ಲಿ ದಾಖಲಾಗಿದೆ ಎಂದು ಹೇಳಿದರು.

ಗಂಭೀರ ಸಂಶೋಧನೆ ಅಗತ್ಯ: ಪಶುವೈದ್ಯ ಇಲಾಖೆಯ ಡಾ. ಮುರುಳೀಧರ್ ಅವರು ಕೆಎಫ್‍ಡಿ ಕುರಿತಂತೆ ಮಾತನಾಡಿ, ದಶಕಗಳಿಂದ ತಾಲೂಕನ್ನು ಬಿಡದೇ ಕಾಡುತ್ತಿರುವ ಮಂಗನ ಕಾಯಿಲೆ ಬಗ್ಗೆ ಗಂಭೀರವಾಗಿ ಸಂಶೋದನೆ ನಡೆಸುವ ಅಗತ್ಯವಿದೆ. ಈ ವರೆಗೆ ಕೇವಲ ಮಂಗಗಳ ಸುತ್ತಲೇ ಈ ಬಗ್ಗೆ ಚಿಂತನೆ ನಡೆದಿದೆ. ಪಟ್ಟಣ ವ್ಯಾಪ್ತಿಯಲ್ಲಿ ಭಾರಿ ಸಂಖ್ಯೆಯ ಮಂಗಗಳಿದ್ದರೂ ಈ ಸೋಂಕು ಈ ವರೆಗೆ ಪಟ್ಟಣದಲ್ಲಿ ಕಾಣಿಸಿಕೊಂಡಿಲ್ಲ. ರೋಗಾಣು ಹರಡುತ್ತಿರುವ ಟಿಕ್ಸ್ ಬೇರೆ ರೂಪ ತಾಳುತ್ತಿರುವಂತಿದೆ. ಈ ಬಗ್ಗೆ ಬೇರೆ ಆಯಾಮಗಳಿಂದಲೂ ರೀಸರ್ಚ್ ಮಾಡುವ ಅಗತ್ಯವಿದೆ ಎಂದರು.

ಬಿಜೆಪಿಗೆ ಮತ ಕೇಳಲು ಹಿಂಜರಿಕೆಯ ಅವಶ್ಯಕತೆ ಇಲ್ಲ: ಶೋಭಾ ಕರಂದ್ಲಾಜೆ

ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆಯಿದೆ. ಈಗಾಗಲೇ ಕೊಳವೆಬಾವಿಗಳೂ ವಿಫಲವಾಗುತ್ತಿವೆ. ಹೀಗಾಗಿ, ನೀರಿನ ಟ್ಯಾಂಕ್ ನಿರ್ಮಾಣ ಸೇರಿದಂತೆ ಕುಡಿಯುವ ನೀರಿನ ಕಾಮಗಾರಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಡಚಣೆ ಮಾಡಬಾರದು ಎಂದು ತಾಕೀತು ಮಾಡಿದರು. ಅರಣ್ಯ ಇಲಾಖೆ ಮೇಲಿನ ಚರ್ಚೆಯಲ್ಲಿ ಹೆದ್ದೂರಿನ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕರು, ಕಾಡಿನಲ್ಲಿ ಪ್ರಾಣಿಗಳಿಗೂ ಕುಡಿಯುವ ನೀರು ಸಿಗದ ಕಾರಣ ಊರಿಗೆ ದಾಳಿ ಇಡುವ ಸಾಧ್ಯತೆಯಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದೂ ಹೇಳಿದರು.

click me!