ಆನೇಕಲ್: ಹಸು ಮೇಯಿಸುತ್ತಿದ್ದ ವೇಳೆ ಕಾಡಾನೆ ದಾಳಿ, ಸ್ಥಳದಲ್ಲೇ ಮಹಿಳೆ ಸಾವು

By Girish Goudar  |  First Published May 27, 2023, 8:58 PM IST

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟಕ್ಕೆ ಹೊಂದಿಕೊಂಡಿರುವ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದ ಘಟನೆ 


ಆನೇಕಲ್(ಮೇ.27): ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟಕ್ಕೆ ಹೊಂದಿಕೊಂಡಿರುವ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು(ಶನಿವಾರ) ನಡೆದಿದೆ. 

ಹಸು ಮೇಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹದೇವಮ್ಮ(48) ಎಂಬಾಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

Tap to resize

Latest Videos

undefined

BENGALURU: ಬಾಡಿಗೆ ಮನೆ ಮಾಲೀಕರೇ ಹುಷಾರ್, ತಲೆ ಒಡೆಯುವ ಗ್ಯಾಂಗ್ ಬಂದಿದೆ ಎಚ್ಚರ!

ಮೃತ ಮಹಿಳೆ ಕುಟುಂಬಕ್ಕೆ ಅರಣ್ಯಾಧಿಕಾರಿಗಳಿಂದ ಧಮ್ಕಿ? 

ಯಾರಿಗೂ ತಿಳಿಸದಂತೆ ಶವವನ್ನ ತೆಗೆದುಕೊಂಡು ಹೋಗುವಂತೆ ಕುಟುಂಬಸ್ಥರಿಗೆ ಅರಣ್ಯಾಧಿಕಾರಿಗಳು ತಾಕೀತು ಮಾಡಿದ್ದರೆಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. 

ಅರಣ್ಯಾಧಿಕಾರಿಗಳ ಬೇಜವಾಬ್ದಾರಿತನವೇ ಘಟನೆಗೆ ಕಾರಣವೆಂದು ಮೃತಳ ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿ ಆಕ್ರೋಶವನ್ನ ಹೊರಹಾಕಿದ್ದಾರೆ. ಮೃತಳ ಕುಟುಂಬಕ್ಕೆ ಪರಿಹಾರ ನೀಡುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. 

click me!