ರಾಜ್ಯದ ಕೆಲವೆಡೆ ಮಳೆ : ಸಿಡಿಲಿಗೆ ಮಹಿಳೆ ಬಲಿ

Kannadaprabha News   | Asianet News
Published : May 30, 2021, 07:49 AM IST
ರಾಜ್ಯದ ಕೆಲವೆಡೆ ಮಳೆ :  ಸಿಡಿಲಿಗೆ ಮಹಿಳೆ ಬಲಿ

ಸಾರಾಂಶ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ  ವಿಜಯಪುರ ಜಿಲ್ಲೆಯಲ್ಲಿ ಸಿಡಿಲಿಗೆ ಮಹಿಳೆ ಬಲಿ ದಕ್ಷಿಣ ಕನ್ನಡದಲ್ಲಿ ಹೆಚ್ಚಿನ ಮಳೆ

ಬೆಂಗಳೂರು (ಮೇ.30): ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕೆಲಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಸುರಿದಿದ್ದು ಸಿಡಿಲಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಿಂದ ವರದಿಯಾಗಿದೆ. 
ಸಿಂಧಗೇರಿ ಗ್ರಾಮದ ಮುರಿಗೆಮ್ಮ(29) ಮೃತ ಮಹಿಳೆ.

 ದಕ್ಷಿಣ ಕನ್ನಡದ ಮಂಗಳೂರು, ಸುಳ್ಯ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು ಪುತ್ತೂರು, ಬೆಳ್ತಂಗಡಿ, ಬಂಟ್ವಾಳಗಳಲ್ಲಿ ಸಾಧಾರಣ ಮಳೆಯಾಗಿದೆ.

ಮುಂಗಾರು ಈ ಸಲ 1 ವಾರ ವಿಳಂಬ? .

 ಉಡುಪಿ, ಬ್ರಹ್ಮಾವರ, ಕಾಪು, ಕುಂದಾಪುರ, ಬೈಂದೂರು, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾಗದಲ್ಲಲ್ಲಿ ಉತ್ತಮ ಮಳೆಯಾಗಿದೆ.

ಜೂನ್ 1 ರಿಂದ ಕೇರಳಕ್ಕೆ ಮುಂಗಾರು ಪ್ರವೇಶ ಮಾಡಲಾಗಿದ್ದು ಜೂನ್ 5ರ ಬಳಿಕ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ. ಈಗಾಗಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. 

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC