ಹೊಸಪೇಟೆ: ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

Published : Jul 11, 2023, 10:46 AM IST
ಹೊಸಪೇಟೆ: ಆಂಬ್ಯುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಸಾರಾಂಶ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ನಡೆದ ಘಟನೆ. ಮೊದಲ ಹೆರಿಗೆಗೆಂದು ಆಸ್ಪತ್ರೆಗೆ ಕೊಂಡೊಯ್ಯೋ ದಾರಿ ಮಧ್ಯೆ ಆಂಬ್ಯುಲೆನ್ಸ್‌ನಲ್ಲಿ ಹೆರಿಗೆಯಾಗಿದೆ. 

ವಿಜಯನಗರ(ಜು.11): ಗರ್ಭಿಣಿ ಮಹಿಳೆಯೊಬ್ಬರಿಗೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆ ಮಾಡಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ.  
ಪಾಪಿನಾಯಕನ ಹಳ್ಳಿ ಗ್ರಾಮದ ಯಲ್ಲಮ್ಮ(28) ಎಂಬುವರೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ.  

ಕಮಲಾಪುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಮೊದಲ ಹೆರಿಗೆಗೆಂದು ಆಸ್ಪತ್ರೆಗೆ ಕೊಂಡೊಯ್ಯೋ ದಾರಿ ಮಧ್ಯೆ ಆಂಬ್ಯುಲೆನ್ಸ್‌ನಲ್ಲಿ ಹೆರಿಗೆಯಾಗಿದೆ. 

ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತಪಟ್ಟಿದ್ದ ಮಹಿಳೆಯ ಮಗು ಸಾವು

ಆಂಬ್ಯುಲೆನ್ಸ್‌ ಸಿಬ್ಬಂದಿ ಸುರೇಶ್ ಎಸ್.ಕೆ. ಚಾಲಕ ಬಾಬು ಅವರ ಸಮಯ ಪ್ರಜ್ಞೆಯಿಂದ ಮಹಿಳೆಗೆ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ. 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!