ಆ್ಯಂಬುಲೆನ್ಸ್​​ನಲ್ಲೇ ಹೆರಿಗೆ: ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

By Govindaraj S  |  First Published Jul 14, 2023, 9:56 AM IST

108 ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಸುಸೂತ್ರ ಹೆರಿಗೆಯಾಗಿದ್ದು, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಯಡಹಳ್ಳಿ ಗ್ರಾಮದ ನೀಲಮ್ಮ ಆ್ಯಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 


ಯಾದಗಿರಿ (ಜು.14): ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. 108 ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಸುಸೂತ್ರ ಹೆರಿಗೆಯಾಗಿದ್ದು, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಯಡಹಳ್ಳಿ ಗ್ರಾಮದ ನೀಲಮ್ಮ ಆ್ಯಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ನೀಲಮ್ಮಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. 

ಆಗ ಕೂಡಲೇ ಕುಟುಂಬಸ್ಥರು ಆ್ಯಂಬುಲೆನ್ಸ್ ಸಹಾಯಕ್ಕೆ ಮುಂದಾಗಿದ್ರು. ಆ್ಯಂಬುಲೆನ್ಸ್‌ನಲ್ಲಿ ಹುಣಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಯಡಹಳ್ಳಿ ಗ್ರಾಮದ ಹೊರಭಾಗದ ಮಾರ್ಗ ಮಧ್ಯೆ ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ಸ್ಟಾಪ್ ನರ್ಸ್ ವಿಶ್ವನಾಥ ಕಕ್ಕೇರಿ, ಸಿಬ್ಬಂದಿ ರಾಜಶೇಖರ ದನಶೆಟ್ಟಿಯ ಸಮಯ ಪ್ರಜ್ಞೆಯಿಂದ ಸುಸೂತ್ರ ಹೆರಿಗೆಯಾಗಿದೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದು, ಹುಣಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

Latest Videos

undefined

ವಿದ್ಯಾರ್ಥಿನಿಯ ಆತ್ಮಹತ್ಯೆ: ಪ್ರೀತಿಸುವಂತೆ ಪೀಡಿಸಿದ ವ್ಯಕ್ತಿ ಬಂಧನ

ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿ: ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಬಲಿಯಾಗಿದೆ ಎಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಯ ಎದುರು ಸಾರ್ವಜನಿಕರು ಹಾಗೂ ಮಗುವಿನ ಪೋಷಕರು ಪ್ರತಿಭಟನೆ ಮಾಡಿದರು. ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆಂದು ಬಂದಿದ್ದ ಸಾದರಹಳ್ಳಿಯ ಲಿಂಗರಾಜ್‌ ಪತ್ನಿ ಅರ್ಪಿತಾರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯದ ಕಾರಣ ಗರ್ಭದಲ್ಲೇ ಮಗು ಉಸಿರಾಟದ ತೊಂದರೆ ಅನುಭವಿಸಿತ್ತು ಎಂದು ಹೇಳಲಾಗಿದೆ. ಕೂಡಲೇ ಲಿಂಗರಾಜ್‌, ಪತ್ನಿಯನ್ನು ತಿಪಟೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದ ವೇಳೆ ಅಲ್ಲಿನ ವೈದ್ಯರು ಸಮಯ ಮೀರಿರುವ ಕಾರಣ ಮಗು ಗರ್ಭದಲ್ಲೇ ಮೃತ ಪಟ್ಟಿದೆ ಎಂದು ಹೇಳಿ ಸೇರಿಯನ್‌ ಮಾಡಿ ಮಗುವನ್ನು ಹೊರತೆಗೆದರು ಎಂದು ತಿಳಿದು ಬಂದಿದೆ.

ತಾಲೂಕು ಆಟೋ ಮತ್ತು ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ನವಜಾತ ಶಿಶುವಿನ ಕಳೇಬರದೊಂದಿಗೆ ಪ್ರತಿಭಟನೆ ನಡೆಸಿದರು. ಮೃತ ಮಗುವಿನ ತಂದೆ ಲಿಂಗರಾಜ್‌ ಮಾತನಾಡಿ, ಪತ್ನಿ ಗರ್ಭ ಧರಿಸಿದ ವೇಳೆ ಸರ್ಕಾರಿ ಆಸ್ಪತ್ರೆಯಲ್ಲೇ ತಪಾಸಣೆ ಮಾಡಿಸಲಾಗುತ್ತಿತ್ತು. ಕೆಲ ತಿಂಗಳ ನಂತರ ತಮ್ಮ ಖಾಸಗಿ ಆಸ್ಪತ್ರೆಗೆ ಬರುವಂತೆ ಹೇಳಿದ ಡಾ. ಮುರುಳಿಯವರು ಚಿಕಿತ್ಸೆ ಮುಂದುವರೆಸಿದ್ದರು. ಹೆರಿಗೆಯ ವೇಳೆ ಸಮೀಪಿಸುತ್ತಿದ್ದಂತೆ ಖಾಸಗಿ ಆಸ್ಪತ್ರೆಯಲ್ಲಿ ವಿಧಿಸುವ ಶುಲ್ಕ ಭರಿಸಲು ಸಾಧ್ಯವಿಲ್ಲದ ಕಾರಣ ಸರ್ಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆತಂದಿದ್ದೆ. 

ಆಗ ಸರಿಯಾಗಿ ತಪಾಸಣೆ ಮಾಡದೇ ಡಾ.ಮುರುಳಿಯವರ ನಿರ್ಲಕ್ಷತ್ರ್ಯ ಪರಿಣಾಮ ಮಗು ಮೃತಪಟ್ಟಿದೆ ಎಂದು ಆರೋಪಿಸಿದರು. ಅಧಿಕಾರಿಗಳ ಭೇಟಿ: ತಹಸೀಲ್ದಾರ್‌ ವೈ.ಎಂ.ರೇಣುಕುಮಾರ್‌ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರುವ ತನಕ ಪ್ರತಿಭಟನೆ ಮುಂದವರೆಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು. ಸಾರ್ವಜನಿಕರ ಪ್ರತಿಭಟನೆ ಹೆಚ್ಚುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಮಲೇರಿಯಾ ಅಧಿಕಾರಿ ಆಗಮಿಸಿ ಜನರ ಅಹವಾಲು ಕೇಳಿದರು.

ವರ್ಗಾವಣೆ ದಂಧೆ ನಡೆದಿದ್ರೆ ನಿವೃತ್ತಿ: ಸಿದ್ದು ಸವಾಲ್‌

ಕರುನಾಡ ವಿಜಯಸೇನೆ ಅಧ್ಯಕ್ಷ ತಾವರೇಕೆರೆ ಸುರೇಶ್‌, ವೈದ್ಯರು ಹೆರಿಗೆ ಮಾಡುವ ವೇಳೆ ಸಾವಿರಾರು ರು. ಲಂಚ ಪಡೆಯುತ್ತಾರೆ. ಮೂರ್ನಾಲ್ಕು ವೈದ್ಯರು ಖಾಸಗಿ ಆಸ್ಪತ್ರೆ ತೆರೆದು ಚಿಕಿತ್ಸೆ ನೀಡುತ್ತಾರೆ. ಖಾಸಗಿ ಆಸ್ಪತ್ರೆ ಹೆಚ್ಚಾಗಿರುವುದರಿಂದ ಸರ್ಕಾರಿ ಆಸ್ಪತ್ರೆಗೆ ಸಕಾಲದಲ್ಲಿ ಹಾಜರಾಗುವುದಿಲ್ಲ. ಈ ಸರ್ಕಾರಿ ಆಸ್ಪತ್ರೆಯನ್ನು ವ್ಯಾಪಾರಿ ಕೇಂದ್ರವನ್ನಾಗಿಸಿಕೊಂಡಿದ್ದಾರೆ ಎಂದು ದೂರಿದರು.

click me!