ಕುಷ್ಟಗಿ: ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

Kannadaprabha News   | Asianet News
Published : Mar 31, 2021, 01:20 PM IST
ಕುಷ್ಟಗಿ: ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಸಾರಾಂಶ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಕಾಪುರ ಗ್ರಾಮದಲ್ಲಿ ನಡೆದ ಘಟನೆ| ಆಸ್ಪತ್ರೆಗೆ ಕರೆತರುತ್ತಿರುವ ಸಂದರ್ಭದಲ್ಲಿ ರಸ್ತೆ ಮಧ್ಯೆ ಹೆರಿಗೆ| ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಹಿಳೆಗೆ ಸುರಕ್ಷಿತ ಹೆರಿಗೆ| 

ಕುಷ್ಟಗಿ(ಮಾ.31): ತಾಲೂಕಿನ ಶಾಕಾಪುರ ಗ್ರಾಮದ ಗರ್ಭಿಣಿಯೊಬ್ಬರು ತಾಲೂಕು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಮಂಗಳವಾರ ಬೆಳಗ್ಗೆ ಶಾಕಾಪುರ ಗ್ರಾಮದ ಪುಷ್ಪಾ ಯಂಕಪ್ಪ ಎಂಬ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ಕರೆತರುತ್ತಿರುವ ಸಂದರ್ಭದಲ್ಲಿ ರಸ್ತೆ ಮಧ್ಯೆ ಹೆರಿಗೆ ನೋವು ಕಾಣಿಸಿಕೊಂಡಿದೆ. 

ಗಂಗಾವತಿ ಬಳಿ ಭೀಕರ ಅಪಘಾತ: ಮೂವರು ಅನ್ನದಾತರ ದುರ್ಮರಣ

ಸಿಬ್ಬಂದಿ ಭೀಮಪ್ಪ ಲಿಂಗದಹಳ್ಳಿ ಹಾಗೂ ಆ್ಯಂಬುಲೆನ್ಸ್‌ ಪೈಲೆಟ್‌ ಕೆ. ಮಲ್ಲೇಶ ಇವರಿಬ್ಬರ ಸಮಯಪ್ರಜ್ಞೆಯಿಂದ ಮಹಿಳೆಗೆ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ ಮತ್ತು ಮಕ್ಕಳು ಸುರಕ್ಷಿತವಾಗಿ ಆರೋಗ್ಯವಾಗಿದ್ದಾರೆ.
 

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!