ಬೈಕಿನ ಹಿಂಬದಿಯಲ್ಲಿ ಕೂತಿದ್ದ ಮಹಿಳೆಯ ಸೀರೆ ಸೆರಗು ಬೈಕಿನ ಚಕ್ರಕ್ಕೆ ಸಿಲುಕಿ ಕಾಲು ಕೂಡ ಬೈಕಿನ ಚಕ್ರದೊಳಗೆ ಸಿಲುಕಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನರಳಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಫೆ.08): ಬೈಕಿನ ಹಿಂಬದಿಯಲ್ಲಿ ಕೂತಿದ್ದ ಮಹಿಳೆಯ ಸೀರೆ ಸೆರಗು ಬೈಕಿನ ಚಕ್ರಕ್ಕೆ ಸಿಲುಕಿ ಕಾಲು ಕೂಡ ಬೈಕಿನ ಚಕ್ರದೊಳಗೆ ಸಿಲುಕಿಕೊಂಡು ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನರಳಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ತರೀಕೆರೆ ಪಟ್ಟಣ ಸಮೀಪದ ಇಟ್ಟಿಗೆ ಗ್ರಾಮದ ಯಶೋದಾ ಬಾಯಿ ಎಂಬ ಮಹಿಳೆ ಬೈಕಿನಲ್ಲಿ ತರೀಕೆರೆ ಪಟ್ಟಣಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಬೈಕಿನ ಹಿಂದೆ ಕೂತಿದ್ದ ಮಹಿಳೆಯ ಸೀರೆ ಸೆರಗು ಹಾಗೂ ನೆರಿಗೆ ಬೈಕಿನ ಚಕ್ರಕ್ಕೆ ಸಿಲುಕಿ, ಕಾಲು ಕೂಡ ಚಕ್ರದೊಳಗೆ ಸಿಲುಕಿಕೊಂಡಿದೆ.
ಕೊಡಲೇ ಬೈಕ್ ಸವಾರ ಹಾಗೂ ಮಹಿಳೆ ಕೆಳಕ್ಕೆ ಬಿದ್ದಿದ್ದಾರೆ. ಮಹಿಳೆಯ ಕಾಲು ಗೇರ್ ಬಾಕ್ಸ್ ಮೂಲಕ ಚಕ್ರದ ಒಳಗೆ ಸಿಲುಕಿಕೊಂಡಿದೆ. ಸುಮಾರು ಒಂದು ಗಂಟೆಗಳ ಕಾಲ ಮಹಿಳೆ ನರಳಾಡಿದ್ದಾರೆ. ಬಳಿಕ ಬೈಕಿನ ಚೈನ್ ಕಟ್ ಮಾಡಿ ಗೇರ್ ಬಾಕ್ಸ್ ಬಿಚ್ಚಿ ಮಹಿಳೆಯ ಕಾಲನ್ನು ಹೊರ ತೆಗೆದಿದ್ದಾರೆ. ಕಾಲಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ. ಈ ದೃಶ್ಯ ನೋಡುವರಿಗೆ ಮೈರೋಮ ಎದ್ದು ನಿಲ್ಲುವಂತೆ ಮಾಡುತ್ತದೆ. ಸೀರೆಯುಟ್ಟ ಮಹಿಳೆಯರು ಬೈಕಿನ ಹಿಂಭಾಗ ಕೂತು ಹೋಗುವಾಗ ತೀವ್ರವಾದ ಎಚ್ಚರಿಕೆಯಿಂದ ಇರಬೇಕಾಗಿದೆ.
ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಆಪ್ ಮಾಡುತ್ತಾ ಕಮಾಲ್: ಸಂಭಾಜೀ ನೇತೃತ್ವದಲ್ಲಿ ಪಕ್ಷ ಸಂಘಟನೆ
ಪತ್ನಿ ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ: ಮದ್ಯ ಸೇವಿಸಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಪತ್ನಿ ಹತ್ಯೆ ಮಾಡಿದ ಪತಿಗೆ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರುಪಾಯಿ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದೆ. ಕಡೂರು ತಾಲೂಕಿನ ಕಾವಲಹಟ್ಟಿಗ್ರಾಮದ ಶೇಖರಪ್ಪ ಅವರಿಗೆ ಶಿಕ್ಷೆ ವಿಧಿಸಿ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಸಿ. ಭಾನುಮತಿ ಅವರು ತೀರ್ಪು ನೀಡಿದ್ದಾರೆ. ಶೇಖರಪ್ಪ ಅವರು ಮದ್ಯ ಸೇವಿಸಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಪತ್ನಿ ಗೀತಾ ಅವರಿಗೆ 2021ರ ಜುಲೈ 8 ರಂದು ರಾತ್ರಿ ತೀವ್ರ ಸ್ವರೂಪದ ಗಾಯಗಳಾಗುವ ರೀತಿಯಲ್ಲಿ ಹೊಡೆದಿದ್ದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕಾವಲುಗಾರನಾಗಿ ಸೇವೆ: ಎಚ್.ಡಿ.ಕುಮಾರಸ್ವಾಮಿ
ಗಾಯಗೊಂಡಿದ್ದ ಗೀತಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ವಾಹನ ಸೌಲಭ್ಯ ಇಲ್ಲದೆ ಇದ್ದರಿಂದ ಮನೆಯಲ್ಲಿ ಮಲಗಿಸಲಾಗಿದ್ದು, ಬೆಳಗ್ಗೆ ಎದ್ದು ನೋಡಿದಾಗ ಗೀತಾ ಅವರು ಮೃತಪಟ್ಟಿದ್ದರು. ಈ ಸಂಬಂಧ ಶೇಖರಪ್ಪ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಡೂರು ಪೊಲೀಸರು ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಸಲ್ಲಿಸಿದ್ದರು. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಬಿ.ಸಿ. ಭಾನುಮತಿ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರುಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಭಾವನ ಅವರು ವಾದ ಮಂಡಿಸಿದರು.