
ಶಿವಮೊಗ್ಗ(ಜ.23): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನೆಲೆ ಸಿಹಿ ಹಂಚುವ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬಳು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಘಟನೆ ಶಿವಮೊಗ್ಗದಲ್ಲಿ ಸೋಮವಾರ ನಡೆದಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದರು.
ನಗರದ ಶಿವಪ್ಪನಾಯಕ ಪ್ರತಿಮೆ ಬಳಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಲಡ್ಡು ಹಂಚುತ್ತಿದ್ದರು. ಇದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಹಾಗಾಗಿ, ಜನರು ಮುಂದೆ ಸಾಗುವಂತೆ ಪೊಲೀಸರು ತಿಳಿಸುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಬುರ್ಖಾ ಧರಿಸಿದ್ದ ಮಹಿಳೆಗೂ ಮುಂದೆ ಸಾಗುವಂತೆ ಸೂಚಿಸಿದರು. ಆಗ ಆಕ್ರೋಶಗೊಂಡ ಮಹಿಳೆ ಪ್ರಧಾನಿ ಮೋದಿ ಅವರನ್ನು ನಿಂದಿಸಿದ್ದಾಳೆ.
ರಾಮ ಬಂದಾಗಿದೆ, ಇನ್ನು ಎಲ್ಲ ವಿವಾದಗಳಿಗೂ ಅಂತ್ಯ ಹಾಡಿ; ನವಭಾರತ ಉದಯವಾಯ್ತು: ಮೋಹನ್ ಭಾಗವತ್
ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಮಹಿಳೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಾರೆ.