ಮಹಿಳಾ ಅಭಿವೃದ್ಧಿ ನೌಕರನಿಂದಲೇ ಪತ್ನಿಗೆ ಕಿರುಕುಳ, ಗೃಹಿಣಿ ಆತ್ಮಹತ್ಯೆ ಯತ್ನ

Suvarna News   | Asianet News
Published : Mar 05, 2020, 12:21 PM ISTUpdated : Mar 05, 2020, 12:25 PM IST
ಮಹಿಳಾ ಅಭಿವೃದ್ಧಿ ನೌಕರನಿಂದಲೇ ಪತ್ನಿಗೆ ಕಿರುಕುಳ, ಗೃಹಿಣಿ ಆತ್ಮಹತ್ಯೆ ಯತ್ನ

ಸಾರಾಂಶ

ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿಯೇ ತನ್ನ ಪತ್ನಿಗೆ ಕಿರುಕುಳ ನೀಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಿರುಕುಳದಿಂದ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿ ಸಾವು‌ ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.  

ಮೈಸೂರು(ಮಾ.05): ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿಯೇ ತನ್ನ ಪತ್ನಿಗೆ ಕಿರುಕುಳ ನೀಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಿರುಕುಳದಿಂದ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿ ಸಾವು‌ ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಪತಿಯ ಕಿರುಕುಳದಿಂದ ಗೃಹಿಣಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ನಾಗವೇಣಿ ಅಲಿಯಾಸ್ ಮಣಿ (41) ಆತ್ಮಹತ್ಯೆಗೆ ಯತ್ನಿಸಿದವರು. ವೆಂಕಟಪ್ಪ ಅವರು ಪತ್ನಿ ನಾಗವೇಣಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು.

ಗೆಳೆಯನ ಮಂಚಕ್ಕೆ ದೂಡಿದ ಪತಿ, ಗೃಹಿಣಿ ಆತ್ಮಹತ್ಯೆ

ಹುಣಸೂರು ತಾಲೂಕಿನಲ್ಲಿ ಸಹಾಯಕ ಶಿಶುಯೋಜನಾ ಅಧಿಕಾರಿಯಾಗಿರುವ ವೆಂಕಟಪ್ಪ 1997ರಲ್ಲಿ ಮಣಿ ಅವರನ್ನು ಮದುವೆಯಾಗಿದ್ದರು. ದಂಪತಿ ಮೈಸೂರು ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ವಾಸವಿದ್ದರು. ಮಾರ್ಚ್ 3ರಂದು ಮಹಿಳೆ ಮನೆಯಲ್ಲಿ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕುಟುಂಬಸ್ಥರು ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ನಾಗವೇಣಿ ಸಾವು‌ ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

#Newsin100Seconds I ಕ್ಷಣದ ಪ್ರಮುಖ ಸುದ್ದಿಗಳು

"

 

PREV
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?