ಮಹಿಳಾ ದಿನಾಚರಣೆಯೆಂದೇ ಡೆತ್ ನೋಟ್ ಬರೆದಿಟ್ಟು ಪ್ರಾಧ್ಯಾಪಕಿ ಆತ್ಮಹತ್ಯೆ: ಕಾರಣ ?

Suvarna News   | Asianet News
Published : Mar 08, 2020, 07:04 PM IST
ಮಹಿಳಾ ದಿನಾಚರಣೆಯೆಂದೇ ಡೆತ್ ನೋಟ್ ಬರೆದಿಟ್ಟು ಪ್ರಾಧ್ಯಾಪಕಿ ಆತ್ಮಹತ್ಯೆ: ಕಾರಣ ?

ಸಾರಾಂಶ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಾಧ್ಯಾಪಕಿ| ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದ ಘಟನೆ| ಪಟ್ಟಣದ ಕೋಟೆ ಆವರಣದಲ್ಲಿರುವ ಝರ‌ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ  ಪೂಜಾ| ಪೂಜಾ ಸಾವಿನಿಂದ  ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|

ಬೀದರ್[ಮಾ.08]: ಡೆತ್ ನೋಟ್ ಬರೆದಿಟ್ಟು ಪ್ರಾಧ್ಯಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಇಂದು[ಭಾನುವಾರ] ನಡೆದಿದೆ. ಪೂಜಾ ಸಂಗಪ್ಪ ಹುಲಸೂರೆ(26) ಎಂಬುವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾರೆ. 

ಇಂದು ಬೆಳಗಿನ ಜಾವ ಮನೆಯಿಂದ ಹೋಗಿದ್ದ ಪೂಜಾ ಪಟ್ಟಣದ ಕೋಟೆ ಆವರಣದಲ್ಲಿರುವ ಝರ‌ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾ ಸಾಯುವ ಮುನ್ನ ಬರೆದಿಟ್ಟ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನನ್ನ ಸಾವಿಗೆ ಯಾರು ಕಾರಣರಲ್ಲ, ನಾನು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳುತ್ತಿದ್ದೇನೆ ಎಂದು ಬರೆಯಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೃತ ಪೂಜಾ ಭಾಲ್ಕಿ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪೂಜಾ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ನಗರ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ದಿನಾಚರಣೆಯೆಂದೇ ಪೂಜಾ ಸಾವನ್ನಪ್ಪಿರುವುದು ಮಾತ್ರ ವಿಪರ್ಯಾಸ. 

PREV
click me!

Recommended Stories

ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!
ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?