ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕಾಗತಿ ನಾಗರಾಜಪ್ಪ.
ಚಿಕ್ಕಬಳ್ಳಾಪುರ (ಡಿ. 19): ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಇನ್ನು ಮುಂದೆ ನರೇಗಾದಡಿ (NREGA) ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೂಲಿ ಕೆಲಸದಲ್ಲಿ ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ಶೇ.50 ರಷ್ಟುರಿಯಾಯಿತಿಯನ್ನು ನೀಡುವಂತೆ ರಾಜ್ಯದ ಎಲ್ಲ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.
ಕೆಲಸದ ಪ್ರಮಾಣದಲ್ಲಿ ಶೇ.50 ರಿಯಾಯಿತಿ
ಈಗಾಗಲೇ ಉದ್ಯೋಗ (Employment) ಖಾತ್ರಿ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಒಂದು ದಿನದ ಕೂಲಿ ಕೆಲಸದ ಪ್ರಮಾಣದಲ್ಲಿ ಶೇ.50 ರಿಯಾಯಿತಿ ನೀಡುತ್ತಿರುವ ಸರ್ಕಾರ ಇದನ್ನು ಗರ್ಭಿಣಿ ಮಹಿಳೆಯರಿಗೆ ಹಾಗೂ ಬಾಣಂತಿಯರಿಗೂ ವಿಸ್ತರಿಸಿದೆ.
6 ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗು ಜನನ ಆಗುವವರೆಗೂ ಹಾಗೂ ಬಾಣಂತಿಯರಿಗೆ ಮಗು ಜನಸಿದ ದಿನದಿಂದ ಮುಂದಿನ 6 ತಿಂಗಳ ಅವಧಿವರೆಗೂ ಕೂಡ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟುರಿಯಾಯಿತಿ ನೀಡಲು ರಾಜ್ಯ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆಯುಕ್ತರು ಜಿಪಂ ಸಿಇಒಗಳಿಗೆ ಸೂಚಿಸಿದ್ದಾರೆ. ನರೇಗಾ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರು ಸಾಕಷ್ಟುಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದನ್ನು ಗಮನಿಸಿ ಅವರ ದೈಹಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುವುದು ಅತ್ಯವಶ್ಯಕವೆಂದು ಸರ್ಕಾರ ಮನಗಂಡು ಈ ಆದೇಶ ಹೊರಡಿಸಿದೆ.
Ballari News :ಹರಾಳು ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಪರದಾಟ
ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಗುರಿ
ಪ್ರಸ್ತುತ ನರೇಗಾ ಯೋಜನೆಯಡಿ ಮಹಿಳೆಯರು ಪಾಲ್ಗೊಳ್ಳುವಿಕೆ ಪ್ರಮಾಣ ಶೇ.51 ರಷ್ಟಿದ್ದು ಅದನ್ನು ಶೇ.60ಕ್ಕೆ ಹೆಚ್ಚಿಸುವ ಗುರಿ ಸರ್ಕಾರ ಹೊಂದಿದೆ. ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳುವಂತೆ ಮಾಡಲು ಈಗಾಗಲೇ ಶೇ.60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟುರಿಯಾಯಿತಿ ನೀಡಲಾಗಿದೆ.
ಆರೋಗ್ಯ ಇಲಾಖೆ ತಾಯಿ ಕಾರ್ಡ್ ಪರಿಗಣನೆ
ಗರ್ಭಿಣಿ ಹಾಗೂ ಬಾಣಂತಿಯರು ಉದ್ಯೋಗ ಖಾತ್ರಿ ಯೋಜನೆಯಡಿ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೂಲಿ ಕೆಲಸದಲ್ಲಿ ಶೇ.50 ರಷ್ಟುರಿಯಾಯಿತಿ ಪಡೆಯಬೇಕಾದರೆ ಕಡ್ಡಾಯವಾಗಿ ಆರೋಗ್ಯ ಇಲಾಖೆ ನೀಡಿರುವ ತಾಯಿ ಕಾರ್ಡ್ ಆಧಾರಿಸಿ ಪರಿಗಣಿಸುವಂತೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆಯುಕ್ತರು ರಾಜ್ಯದ ಎಲ್ಲಾ ಜಿಪಂಸ ಸಿಇಒಗಳಿಗೆ ಸೂಚಿಸಿದ್ದಾರೆ
ನರೇಗಾ ಶ್ರಮದಿಂದ ಸ್ಮಶಾನ ಅಭಿವೃದ್ಧಿ
ಬಾಲಕೃಷ್ಣ ಜಾಡಬಂಡಿ
ಹುಬ್ಬಳ್ಳಿ (ನ.20) : ಧಾರವಾಡ ಜಿಲ್ಲೆಯಲ್ಲಿರುವ ಸ್ಮಶಾನಗಳನ್ನು ನರೇಗಾ ಯೋಜನೆಯಡಿ ಹಂತ-ಹಂತವಾಗಿ ಅಭಿವೃದ್ಧಿ ಮಾಡಲು ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಗ್ರಾಮೀಣ ಭಾಗದಲ್ಲಿರುವ ಒಟ್ಟು 374 ಸ್ಮಶಾನಗಳ ಪೈಕಿ ಈಗಾಗಲೇ 79 ಸ್ಮಶಾನಗಳಿಗೆ ಹೊಸ ರೂಪ ನೀಡಲಾಗುತ್ತಿದೆ. ಜತೆಗೆ ಕುಡಿಯುವ ನೀರು, ಬೆಳಕು ಸೇರಿ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಡಿಒ, ತಾಂತ್ರಿಕ ಸಹಾಯಕರ ನೇತೃತ್ವದಲ್ಲಿ ಗ್ರಾಪಂ ವ್ಯಾಪ್ತಿಯ ಸ್ಮಶಾನ ಅಭಿವೃದ್ಧಿ ಕುರಿತು ತೀರ್ಮಾನಿಸಿ ಗ್ರಾಮ ಪಂಚಾಯಿತಿಯಿಂದ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಅದನ್ನು ಪರಿಶೀಲಿಸಿ ಜಿಲ್ಲಾಡಳಿತ ಅನುಮೋದನೆ ನೀಡಲಿದೆ. ಈ ಮೂಲಕ ಈ ಹಿಂದೆ ಇದ್ದ ಸ್ಮಶಾನಕ್ಕೆ ಗ್ರಾಪಂ ಮೂಲಕ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ
2022-23ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ 374 ಸ್ಮಶಾನಗಳಲ್ಲಿ 79 ಸ್ಮಶಾನಗಳ ಅಭಿವೃದ್ಧಿಗೆ ಜಿಲ್ಲಾಡಳಿತ ಅನುಮೋದನೆ ನೀಡಿತ್ತು. ಅದರಂತೆ ಈಗಾಗಲೇ 50ಕ್ಕೂ ಅಧಿಕ ಸ್ಮಶಾನ ಅಭಿವೃದ್ಧಿ ಪೂರ್ಣಗೊಳಿಸಲಾಗಿದೆ. ಇನ್ನು ಕೆಲವಡೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಕೆಲವೆಡೆ ಕಾಮಗಾರಿ ಅರ್ಧಕ್ಕೆ ತಲುಪಿವೆ. ಜಿಲ್ಲೆಯ ಅಳ್ನಾವರ 2, ಅಣ್ಣಿಗೇರಿ 9, ಧಾರವಾಡ 34, ಹುಬ್ಬಳ್ಳಿ 7, ಕಲಘಟಗಿ 15, ಕುಂದಗೋಳ 4, ನವಲಗುಂದದಲ್ಲಿ 8 ಸ್ಮಶಾನಗಳಿಗೆ ಹೊಸ ರೂಪ ನೀಡಲಾಗುತ್ತಿದೆ.
ಸ್ಮಶಾನದ ಜಾಗ ಆಧರಿಸಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ. ಜಾಗ ಸಮತಟ್ಟುಗೊಳಿಸಿ, ಸುತ್ತಲೂ ಗಿಡ ನೆಟ್ಟು ತಂತಿಬೇಲಿ ಅಳವಡಿಸಲಾಗುತ್ತಿದೆ. ಕೆಲವೆಡೆ ತಡೆಗೋಡೆ ಅಗತ್ಯವಿದ್ದರೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಹುಬ್ಬಳ್ಳಿ ತಾಲೂಕಿನ ಕುಸುಗಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ . 16 ಲಕ್ಷ ವೆಚ್ಚದಲ್ಲಿ ಹೊಸ ಸ್ಮಶಾನ ನಿರ್ಮಿಸಲಾಗುತ್ತಿದೆ. 2 ಚಿತಾಗಾರವುಳ್ಳ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದೆ. ಇನ್ನು ಅಗಡಿ, ಕೋಳಿವಾಡ, ಶರೇವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಮಶಾನಗಳ ಅಭಿವೃದ್ಧಿ ಕಾಮಗಾರಿಯೂ ಪ್ರಗತಿಯಲ್ಲಿವೆ.
ಗ್ರಾಮೀಣ ಭಾಗದ ಸ್ಮಶಾನದಲ್ಲಿ ಜಾಗ ಸಮತಟ್ಟುಗೊಳಿಸಿ ಜನರು ಓಡಾಡಲೂ ಸೂಕ್ತ ರಸ್ತೆ ನಿರ್ಮಿಸಲಾಗುತ್ತಿದೆ. ಸುತ್ತಲು ಪ್ಲಾಂಟೇಶನ್ ಮಾಡಿ ಗಿಡ ನೆಡುವುದು, ಚಿತಾಗಾರ ದುರಸ್ತಿ ಮಾಡಲಾಗುತ್ತಿದೆ. ಒಟ್ಟಾರೆ ನರೇಗಾ ಯೋಜನೆಯಡಿ ಗ್ರಾಪಂ ವ್ಯಾಪ್ತಿಯ ಸ್ಮಶಾನವನ್ನು ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎನ್ನುತ್ತಾರೆ ಜಿಲ್ಲಾ ಎಂಐಎಸ್ ಸಂಯೋಜಕ ವಿನಾಯಕ ಕಬನೂರ.