ಬದುಕಿರುವವರೆಗೂ ಪಕ್ಷದ ಸಂಘಟನೆ ಮಾಡುವೆ: ಬಿಎಸ್‌ವೈ

By Kannadaprabha News  |  First Published Nov 5, 2022, 4:21 AM IST

ಅಧಿಕಾರ ಇರಲಿ ಬಿಡಲಿ, ನಾನು ಬದುಕಿರುವವರೆಗೂ ಪಕ್ಷದ ಸಂಘಟನೆ ಮಾಡುವುದಾಗಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.


  ಗುಬ್ಬಿ(ನ.05):  ಅಧಿಕಾರ ಇರಲಿ ಬಿಡಲಿ, ನಾನು ಬದುಕಿರುವವರೆಗೂ ಪಕ್ಷದ ಸಂಘಟನೆ ಮಾಡುವುದಾಗಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮದೊಂದಿಗೆ ಮಾತನಾಡಿ, ನಾನು ಅಧಿಕಾರದಿಂದ ಕೆಳಗೆ ಇಳಿದ್ದಿದ್ದರೂ ಸಹ ಜನರು ಪ್ರೀತಿ ವಿಶ್ವಾಸ ತೋರುತ್ತಿದ್ದಾರೆ. ಮುಖ್ಯಮಂತ್ರಿ ಬೊಮ್ಮಯಿ ಉತ್ತಮ ಕೆಲಸ ಮಾಡುತ್ತಿದ್ದು, ಈ ಬಾರಿಯೂ ಸಹ ನೂರಕ್ಕೆ ನೂರು ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಸತ್ಯ. ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಬಂದಂತಹ ಸಂದರ್ಭದಲ್ಲಿ ಸರ್ವೆ ಮಾಡಿಸಿದ ನಂತರ ಯಾರೂ ಗೆಲ್ಲುತ್ತಾರೆ ಎಂದು ನಿರ್ಧಾರ ಮಾಡಿದ ಮೇಲೇ ಗೆಲ್ಲುವಂತಹ ವ್ಯಕ್ತಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ತಿಳಿಸಿದರು.

Tap to resize

Latest Videos

ಶಾಸಕ ಜ್ಯೋತಿ ಗಣೇಶ್‌, ಬಿಜೆಪಿ (BJP)  ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ಜಿಪಂ ಮಾಜಿ ಸದಸ್ಯರಾದ ಪಿ.ಬಿ.ಚಂದ್ರಶೇಖರಬಾಬು, ಡಾ.ನವ್ಯಾಬಾಬು, ಜಿ.ಎನ್‌.ಬೆಟ್ಟಸ್ವಾಮಿ, ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಎಸ್‌.ಪಂಚಾಕ್ಷರಿ ಇತರರು ಇದ್ದರು.

ಯಡಿಯೂರಪ್ಪ ನಿರ್ಲಕ್ಷ್ಯ ಮಾಡಲಾಗುತ್ತಿದೆಯಾ

ಕರ್ನಾಟಕದಲ್ಲಿ ಪ್ರಚಂಡ ಬಹುಮತದಿಂದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 150ಕ್ಕೂ ಅಧಿಕ ಬಿಜೆಪಿ ಸ್ಥಾನಗಳು ಬರಲಿವೆ. ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದ್ದೇವೆ. ಇದಕ್ಕೆ ಜನರಿಂದ, ಕಾರ್ಯಕರ್ತರಿಂದ ಉತ್ತಮ ಬೆಂಬಲ ಸಿಗುತ್ತಿದೆ. ಮೋದಿ, ಬೊಮ್ಮಾಯಿ ಸರ್ಕಾರದ ಸಾಧನೆ ಜನರಿಗೆ ತಲುಪಿಸುತ್ತೇವೆ. ದೇಶದಲ್ಲಿ ಬಿಜೆಪಿ ಪರ ಗೆಲುವಿನ ಟ್ರೆಂಡ್‌ ಇದೆ ಎಂದರು.

ಗೋವಾ, ಉತ್ತರಾಖಾಂಡ, ಮಣಿಪುರ, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದೇವೆ. ಹಿಮಾಚಲ ಮತ್ತು ಗುಜರಾತಿನಲ್ಲೂ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್‌ ಸೋಲುವ ಸ್ಥಿತಿಯಲ್ಲಿದೆ. ಬಿಜೆಪಿ ಗೆಲ್ಲುವ ಸ್ಥಿತಿಯಲ್ಲಿದೆ. ಕರ್ನಾಟಕದಲ್ಲಿ ಮೊದಲಿಗಿಂತ ಅಧಿಕ ಸ್ಥಾನ ಗೆದ್ದು ಸರ್ಕಾರ ಮಾಡುತ್ತೇವೆ. ಬಿಜೆಪಿ ಗೆಲುವಿನ ಹಾದಿಯಲ್ಲಿ ಇದ್ದರೆ ಕಾಂಗ್ರೆಸ್‌ ಸೋಲು ಹಾದಿಯಲ್ಲಿದೆ ಎಂದು ಹೇಳಿದರು.

ಮತ್ತೆ ಸಂಕಷ್ಟದಲ್ಲಿ ರಾಜಸ್ಥಾನ ಕಾಂಗ್ರೆಸ್ ಸರ್ಕಾರ, ವಿಶ್ವಾಸ ಮತ ಯಾಚನೆಗೆ ಸರ್ಕಸ್!

ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ನಿರ್ಲಕ್ಷ ಮಾಡುತ್ತಿಲ್ಲ. ಅವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಹೋಗುತ್ತಿದ್ದಾರೆ.ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಅನೇಕ ಬಾರಿ ವಿರೋಧ ಪಕ್ಷ ಪಕ್ಷದ ನಾಯಕರು ಆಗಿದ್ದರು. ಯಡಿಯೂರಪ್ಪ ಕರ್ನಾಟಕದ ಬಹಳ ದೊಡ್ಡ ಮತ್ತುಜನಪ್ರಿಯ ನಾಯಕರಾಗಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ 150 ಸ್ಥಾನ ಪಡೆಯಲು ಶ್ರಮಿಸುತ್ತಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆ ಆದಷ್ಟುಬೇಗ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನನ್ನ ಸ್ನೇಹಿತರು. ಜನರ ಕಾಳಜಿ ಉಳ್ಳವರು ಆಗಿದ್ದಾರೆ. ಅವರೊಂದಿಗೆ ಭಾನುವಾರ ರಾತ್ರಿ ಚರ್ಚೆ ಮಾಡಿದ್ದೇನೆ. ಸಾಮಾನ್ಯವಾಗಿ ಎಲ್ಲರೊಂದಿಗೆ ನಮ್ಮ ಚರ್ಚೆ ಆಗುತ್ತದೆ. ಸಚಿವ ಕಾರಜೋಳ ಅವರು ಪಕ್ಷಕ್ಕೆ ಮಾರ್ಗದರ್ಶನ ಮಾಡುತ್ತಾರೆ, ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು, ಕಾಂಗ್ರೆಸ್‌ ಸೋಲಿಸಲು ರಮೇಶ ಜಾರಕಿಹೊಳಿ ಪಾತ್ರ ಪ್ರಮುಖ ಪತ್ರವಹಿಸಲಿದ್ದಾರೆ ಎಂದರು.

ಬಿಜೆಪಿ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಬಿಜೆಪಿ ಎಲ್ಲಾ ನಾಯಕರು, ಕಾರ್ಯಕರ್ತರು ಒಂದಾಗಿ ಇದ್ದಾರೆ. ಗುಂಪುಗಾರಿಕೆ ಏನೇ ಇದ್ದರೂ ಕಾಂಗ್ರೆಸ್‌ ಪಕ್ಷದಲ್ಲಿ ಇದೆ. ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ ಅವರ ಬಣಗಳಿವೆ. ರಾಹುಲ್‌ ಗಾಂಧಿ ಇಬ್ಬರೂ ನಾಯಕರ ಕೈ ಜೋಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಇಬ್ಬರೂ ನಾಯಕರು ಒಬ್ಬರಿಗೊಬ್ಬರು ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿಲ್ಲ. ಜಗಳ, ಕಿತ್ತಾಟ ಕಾಂಗ್ರೆಸ್‌ ನಲ್ಲಿ ಇದೆ. ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ. ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಗುಂಪುಗಾರಿಕೆ ಇಲ್ಲ ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿನ ಭಿನ್ನಮತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ಕಾರ್ಯಕರ್ತರ ನಡುವೆ ಭಿನ್ನಾಭಿಪ್ರಾಯ ಇರಲೇಬೇಕು. ಇವೆ. ಮನೆಯಲ್ಲೂ ಭಿನ್ನಾಭಿಪ್ರಾಯ ಇರುತ್ತವೆ. ಅದೇ ರೀತಿ ಪಕ್ಷದಲ್ಲೂ ಇರುತ್ತವೆ. ಮನಸ್ಸಿನಿಂದ ಎಲ್ಲರೂ ಒಂದಾಗಿಯೇ ಇದ್ದಾರೆ. ಪ್ರಜಾಪ್ರಭುತ್ವ ದಲ್ಲಿ ಭಿನ್ನವಾದ ಅಭಿಪ್ರಾಯ ಇರಲೇಬೇಕು. ಮನಸ್ಸಿನಿಂದ ಯಾವುದೇ ಭೇದ ಭಾವ ಇಲ್ಲ ಎಂದರು.

click me!