ಜೆಡಿಎಸ್‌ ಅಧಿಕಾರಕ್ಕೆ ಬರಲು ಶ್ರಮಿಸಿ: ನಾಗರಾಜು

By Kannadaprabha News  |  First Published Mar 13, 2023, 5:08 AM IST

ಕಳೆದ ಒಂದೂವರೆ ವರ್ಷದಿಂದ ಗುಬ್ಬಿ ಕ್ಷೇತ್ರ ಪ್ರವಾಸ ಮಾಡಿದ ನನ್ನ ಮುಂದೆ ಗಡಿ ಗ್ರಾಮಗಳ ಸಮಸ್ಯೆ ದೊಡ್ಡ ಪಟ್ಟಿಕಂಡು ಬಂದಿದೆ. ಇಂತಹ ನಿರ್ಲಕ್ಷ್ಯಕ್ಕೆ ಒಳಗಾದ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿ ಸಮಸ್ಯೆ ಬಗೆಹರಿಸುವ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ವಿನೂತನವಾಗಿ ಆರಂಭಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರ ಒತ್ತಾಸೆಯಂತೆ ವಾಸ್ತವ್ಯ ಕಾರ್ಯಕ್ರಮ ಗುಬ್ಬಿ ಕ್ಷೇತ್ರದಲ್ಲಿ ಆರಂಭಿಸಿದ್ದೇವೆ ಎಂದು ಜೆಡಿಎಸ್‌ ಅಭ್ಯರ್ಥಿ ಬಿ.ಎಸ್‌.ನಾಗರಾಜು ತಿಳಿಸಿದರು.


 ಗುಬ್ಬಿ :  ಕಳೆದ ಒಂದೂವರೆ ವರ್ಷದಿಂದ ಗುಬ್ಬಿ ಕ್ಷೇತ್ರ ಪ್ರವಾಸ ಮಾಡಿದ ನನ್ನ ಮುಂದೆ ಗಡಿ ಗ್ರಾಮಗಳ ಸಮಸ್ಯೆ ದೊಡ್ಡ ಪಟ್ಟಿಕಂಡು ಬಂದಿದೆ. ಇಂತಹ ನಿರ್ಲಕ್ಷ್ಯಕ್ಕೆ ಒಳಗಾದ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿ ಸಮಸ್ಯೆ ಬಗೆಹರಿಸುವ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ವಿನೂತನವಾಗಿ ಆರಂಭಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರ ಒತ್ತಾಸೆಯಂತೆ ವಾಸ್ತವ್ಯ ಕಾರ್ಯಕ್ರಮ ಗುಬ್ಬಿ ಕ್ಷೇತ್ರದಲ್ಲಿ ಆರಂಭಿಸಿದ್ದೇವೆ ಎಂದು ಜೆಡಿಎಸ್‌ ಅಭ್ಯರ್ಥಿ ಬಿ.ಎಸ್‌.ನಾಗರಾಜು ತಿಳಿಸಿದರು.

ತಾಲೂಕಿನ ಚೇಳೂರು ಹೋಬಳಿ ಜಾಲಗುಣಿ ಗ್ರಾಮದಲ್ಲಿ ಜೆಡಿಎಸ್‌ ತಾಲೂಕು ಘಟಕ ಆಯೋಜಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಂಚರತ್ನ ಯೋಜನೆ ಸಾಕಾರಕ್ಕೆ ರೈತ ವರ್ಗ ಈಗಾಗಲೇ ಜೆಡಿಎಸ್‌ ಪರ ನಿಲ್ಲಲು ಸಜ್ಜಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಆಡಳಿತ ಮಾಡಲಿದ್ದಾರೆ. ಇದೇ ಸಮಯದಲ್ಲಿ ಗುಬ್ಬಿ ಕ್ಷೇತ್ರದ ಜನತೆ ನನಗೆ ಆಶೀರ್ವದಿಸಿ ನಂತರ ಶಾಸಕರ ಕೆಲಸ ಹೇಗೆ ಎಂಬುದು ತೋರಿಸುವೆ ಎಂದರು.

Tap to resize

Latest Videos

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್‌ ಮಾತನಾಡಿ, ವಾಸ್ತವ್ಯ ಎಂಬ ಪದಕ್ಕೆ ಅರ್ಥ ನೀಡಿದ್ದು ಮಾಜಿ ಸಿಎಂ ಕುಮಾರಸ್ವಾಮಿ. ಮನೆ ಬಾಗಿಲಿಗೆ ತಲುಪುವ ಜನ ಸೇವಕರಾಗಿ ಕೆಲಸ ಮಾಡಿದ್ದರು. ಸರ್ವ ಜನಾಂಗಕ್ಕೂ ನ್ಯಾಯ ಒದಗಿಸಿ ವಾಸ್ತವ್ಯ ಹೂಡಿ ಅಭಿವೃದ್ಧಿ ಕುಂಠಿತ ಗ್ರಾಮವನ್ನು ಗುರುತಿಸುವ ಕೆಲಸ ಮಾಡಿದರು. ಈ ನಿಟ್ಟಿನಲ್ಲಿ ನಾಗರಾಜು ಅವರಿಗೆ ಕೈ ಜೋಡಿಸಿ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಪಪಂ ಮಾಜಿ ಅಧ್ಯಕ್ಷ ಜಿ.ಡಿ.ಸುರೇಶಗೌಡ ಮಾತನಾಡಿದರು.

ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿ ಎಪಿಎಂಸಿ ಮಾಜಿ ಸದಸ್ಯ ಜಿ.ಎಂ.ಶಿವಲಿಂಗಯ್ಯ, ಜೆಡಿಎಸ್‌ ತಾಲೂಕು ಅಧ್ಯಕ್ಷ ಚಿಕ್ಕವೀರಯ್ಯ, ಯುವ ಜೆಡಿಎಸ್‌ ಅಧ್ಯಕ್ಷ ಗಂಗಸಂದ್ರ ಮಂಜಣ್ಣ, ಗ್ರಾಪಂ ಸದಸ್ಯ ಮೋಹನ್‌, ತಾಪಂ ಮಾಜಿ ಸದಸ್ಯ ಕಾಂತರಾಜು, ಮುಖಂಡರಾದ ರಾಮಕೃಷ್ಣಯ್ಯ, ಸಲೀಂಪಾಷಾ, ಬಸವರಾಜು, ಮಧು, ನಾಗರಾಜು, ಮಂಜುನಾಥ, ಆನಂದಪ್ಪ, ರಾಜಣ್ಣ ಇತರರು ಇದ್ದರು 

JDS ಸೇರಿದ ಎ ಮಂಜು

 ರಾಜ್ಯ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಮಾಜಿ ಸಚಿವ ಎ. ಮಂಜು ಬಿಜೆಪಿಯನ್ನು ತೊರೆದು ರಾಮನಗರದಲ್ಲಿ ಇಂದು ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆ ಆಗಿದ್ದಾರೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರಿಂದ ಶಾಲು ಹೊದಿಸಿಕೊಂಡು ಜೆಡಿಎಸ್‌ ಸೇರ್ಪಡೆಗೊಂಡರು.

ಜೆಡಿಎಸ್‌ ಸೇರುವುದಾಗಿ ಅಧಿಕೃತ ಘೋಷಣೆ ಮಾಡಿಕೊಂಡ ಎ.ಮಂಜು: ಮಾ.16ರಂದು ಪಕ್ಷ ಸೇರ್ಪಡೆ

ಈಗಾಗಲೇ ಅರಕಲಗೂಡಿನಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಸಭೆ ನಡೆಸಿದ್ದ ಎ. ಮಂಜು ಅವರು ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸುವ ಉದ್ದೇಶದಿಂದ ಜೆಡಿಎಸ್‌ ಸೇರ್ಪಡೆ ಆಗುವ ಬಗ್ಗೆ ನಿರ್ಧಾರ ಕೈಗೊಂಡಿದ್ದರು. ಇದಕ್ಕೆ ಕಾರ್ಯಕರ್ತರು ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಎಲ್ಲರೂ ಜೆಡಿಎಸ್‌ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಪ್ರಮಾಣ ಮಾಡಿದ್ದರು. ಇಂದು ರಾಮನಗರದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಸಮ್ಮುಖದಲ್ಲಿ ಕಮಲವನ್ನು ಇಳಿಸಿ ತೆನೆ ಹೊರುವ ಮೂಲಕ ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆಯಾದರು.

ಪೂರ್ಣಾಹುತಿ ಪೂಜೆಯಲ್ಲಿ ಭಾಗಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ರಾಮನಗರದ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಮಾಜಿ‌ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರ್ಪಡೆಯಾದರು. ಪಕ್ಷ ಸೇರ್ಪಡೆ ಬಳಿಕ ಎ.ಮಂಜು ಪೂರ್ಣಾಹುತಿ ಪೂಜೆಯಲ್ಲಿ ಭಾಗಿಯಾದರು. ಬಿಡದಿಯ ತೋಟದ ಮನೆಯಲ್ಲಿ ಪೂರ್ಣಾಹುತಿ ಪೂಜೆಯನ್ನು ಆಯೋಜನೆ ಮಾಡಲಾಗಿತ್ತು. 

ಶ್ರೀರಂಗಪಟ್ಟಣ, ಪಾಂಡವಪುರದಲ್ಲಿ ನನ್ನ ಮೇಲೆ ಹಲ್ಲೆಯಾಗಿತ್ತು, ಜೆಡಿಎಸ್‌ ವಿರುದ್ಧ ಹರಿಹಾಯ್ದ ಸುಮಲತಾ!

ಶಾಸಕ ರಾಮಸ್ವಾಮಿಗೆ ಸೆಡ್ಡು ಹೊಡೆಯಲು ತಂತ್ರ: ಮಾಜಿ ಸಚಿವ ಎ.ಮಂಜು ಅವರು ವಿಧಾನಪರಿಷತ್ ಚುನಾಚಣೆಯ ಬಳಿಕ‌ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಕಾಂಗ್ರೆಸ್ ಟಿಕೆಟ್ ಗೆ ಪ್ರಯತ್ನ‌‌ ಮಾಡುತ್ತಿದ್ದರು. ಅಚ್ಚರಿಯೆಂಬಂತೆ ಜೆಡಿಎಸ್ ಟಿಕೆಟ್ ಗಿಟ್ಟಿಸಿಕೊಂಡು ಬಂದಿದ್ದಾರೆ. ಅರಕಲಗೂಡಲ್ಲಿ ಎ.ಮಂಜುಗೆ ಕ್ಲಿಯರ್ ಮಾಡುತ್ತೇವೆ ಅಂತಾ 15 ದಿನಗಳ ಹಿಂದೆಯೇ‌ ಹೇಳಿದ್ದ ಕುಮಾರಸ್ವಾಮಿ ಹೇಳಿದ್ದರು. ಅಂತಿಮವಾಗಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಇನ್ನು ಹಾಲಿ ಶಾಸಕ ಎ.ಟಿ. ರಾಮಸ್ವಾಮಿಗೆ ಸೆಡ್ಡು ಹೊಡೆಯಲು  ಜೆಡಿಎಸ್ ನಾಯಕರು  ಎ.ಮಂಜುಗೆ ಗಾಳ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎ.ಟಿ.ರಾಮಸ್ವಾಮಿ ಕಳೆದೊಂದು ವರ್ಷದಿಂದ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದರು. ಈಗ ದಳಪತಿಗಳು ಎ.ಮಂಜು ಜೊತೆ ಮಾತುಕತೆ‌‌ ಮಾಡಿ ಪಕ್ಷಕ್ಕೆ ಕರೆತಂದಿದ್ದಾರೆ.

click me!