ರಾಜ್ಯದ ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಿ ಜನರಿಗೆ ತಲುಪಿಸುವಲ್ಲಿ ಶ್ರಮವಹಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಹೇಳಿದರು.
ಶಿರಾ : ರಾಜ್ಯದ ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಿ ಜನರಿಗೆ ತಲುಪಿಸುವಲ್ಲಿ ಶ್ರಮವಹಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಹೇಳಿದರು.
ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಿರಾ ತಾಲೂಕಿನ ಕಿಲಾರದಲ್ಲಿ ಗ್ರಾಮದ ಕೆ.ಪಿ ಮಂಜುನಾಥ ಹಾಗೂ ಚಿಕ್ಕನಾಯಕನಹಳ್ಳಿ ಅಣ್ಣನಕೆರೆ ಹೋಬಳಿ ವತಿಯಿಂದ ಚನ್ನಬಸವಯ್ಯ, ಹುಳಿಯಾರು ಹೋಬಳಿಯಿಂದ ವನಜಾಕ್ಷಿ ದೇವರಾಜ್ ರವರು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಅಕ್ರಮ ಸಕ್ರಮ ಭೂ ಮಂಜೂರಾತಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದು, ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಬಗರ್ ಹುಕುಂ ಸಮಿತಿಗೆ ಮೂರು ಜನರ ಹೆಸರು ಆಯ್ಕೆ ಮಾಡಿ ಕಳಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಂದ ಅನುಮೋದನೆ ಪಡೆದು, ಸರ್ಕಾರ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದು, ಎಲ್ಲರೂ ಯಾವುದೇ ತಾರತಮ್ಯ ಇಲ್ಲದಂತೆ ಬಡವರ ಪರ ಕಾರ್ಯ ನಿರ್ವಹಿಸಿ ಪಕ್ಷಕ್ಕೆ ಹೆಸರು ತನ್ನಿ ಎಂದರು.
undefined
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಿಟಿ ಚಿಕ್ಕಣ್ಣ , ಸಿಡಿ ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೆ.ಎನ್.ಶೇಷ ನಾಯಕ್, ಬುಕ್ಕಾಪಟ್ಟಣ ಹೋಬಳಿಯ ಮುಖಂಡರಾದ ಲಿಂಗಣ್ಣ, ಗ್ರಾಪಂ ಸದಸ್ಯ ರಾಮಣ್ಣ ಸೇರಿ ಹಲವರು ಹಾಜರಿದ್ದರು.
ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆ ರದ್ದಾಗುತ್ತೆ
ರಾಮನಗರ (ಜ.30): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುವುದು. ಆದ್ದರಿಂದ ನೀವು ಡಿ.ಕೆ.ಸುರೇಶ್ ಅವರಿಗೆ ಮತ ನೀಡಬೇಕು ಎಂದು ಮಾಗಡಿ ಶಾಸಕ ಹೆಚ್.ಡಿ. ಬಾಲಕೃಷ್ಣ ಜನರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.
ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡಜನರ ಅಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ರೆ ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುತ್ತದೆ. ಆದ್ದರಿಂದ ನೀವು ಸಂಸದ ಡಿ.ಕೆ ಸುರೇಶ್ ಪರ ಮತ ನೀಡಬೇಕು. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ರದ್ದಾಗಲಿವೆ ಎಂದು ತಿಳಿಸಿದರು.
Chitradurga:ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶದ ಜನ ಅಧಿಕಾರಕ್ಕೆ ಬಂದಂತೆ: ಡಿ.ಕೆ. ಶಿವಕುಮಾರ್
ಲೋಕಸಭಾ ಚುನಾವಣೆ ವೇಳೆ ಬಿಜೆಪಿಯವರು ರಾಮ ಮಂದಿರ ನಿರ್ಮಾಣದ ಅಕ್ಷತೆ ಕಾಳನ್ನು ಕೊಟ್ಟು ಮತ ಕೇಳ್ತಿದ್ದಾರೆ. ಆದರೆ, ನಾವು 5 ಗ್ಯಾರಂಟಿಗಳನ್ನ ನೀಡಿ ಮತ ಕೇಳ್ತಿದ್ದೀವಿ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ರೆ ಜನರಿಗೆ 5 ಗ್ಯಾರಂಟಿಗಳು ಇಷ್ಟ ಇಲ್ಲ ಅಂತ ಅರ್ಥವಾದಂತಾಗಲಿದೆ. ಹಾಗಾಗಿ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ. ನಿಮ್ಮ ಮತ ಅಕ್ಷತೆ ಕಾಳಿಗಾ..? ಐದು ಗ್ಯಾರಂಟಿಗಾ ಯೋಚನೆ ಮಾಡಿ ಎಂದು ಜನರಿಗೆ ನೇರವಾಗಿಯೇ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ.
ಕೆರಗೋಡು ಹನುಮ ಧ್ವಜಕ್ಕೆ ಅನುಮತಿ ಕೊಟ್ಟ ಗ್ರಾಮ ಪಂಚಾಯಿತಿ ನಡಾವಳಿ ಪುಸ್ತಕವೇ ನಾಪತ್ತೆ!
2024ರ ಲೋಕಸಭೆ ಚುನಾವಣೆಯಲ್ಲಿ ನಮ್ಮ ರಾಜ್ಯದಿಂದ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನಗಳನ್ನು ನೀಡಿ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಒಂದು ವೇಳೆ ನೀವು ಕಾಂಗ್ರೆಸ್ ಅಭ್ಯರ್ಥೊಗಳನ್ನು ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಅಂತ ಅರ್ಥವಾಗುತ್ತದೆ ಅಲ್ವಾ? ಎಂದು ಜನರನ್ನು ಕೆಣಕಿದ್ದಾರೆ.