ಪಿಎಫ್ಐ ಸಂಘಟನೆಯಿಂದ ಜೀವ ಬೆದರಿಕೆ: ಮೇಲುಕೋಟೆ ಯತಿರಾಜ ಜೀಯರ್‌ಗೆ ವೈ ಮಾದರಿ ಭದ್ರತೆ

By Kannadaprabha NewsFirst Published Feb 8, 2023, 8:39 PM IST
Highlights

ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿವೇದಿತಾ ಪಿಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ. 

ಮಂಡ್ಯ (ಫೆ.08): ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿವೇದಿತಾ ಪಿಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ಆದೇಶಿಸಿದೆ. ಯತಿರಾಜ ಜಿಯರ್ ಅವರಿಗೆ ಇತ್ತೀಚೆಗೆ ಪಿಎಫ್ಐ ಸಂಘಟನೆ ವಿಡಿಯೋ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಿರುವ ಸುದ್ದಿ ರಾಷ್ಟ್ರೀಯ ನ್ಯೂಸ್ ಚಾನೆಲ್‌ಗಳಲ್ಲಿ ಬಿತ್ತರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

ಯದುಗಿರಿ ಯತಿರಾಜ ಮಠದ ಯತಿರಾಜ ಜಿಯರ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶಾಖ ಮಠದಲ್ಲಿ ವಾಸವಾಗಿದ್ದು ಮೇಲುಕೋಟೆ ವೈರಮುಡಿ, ಶ್ರೀ ರಾಮಾನುಜ ತಿರುನಕ್ಷತ್ರ ಸೇರಿದಂತೆ ವಿಶೇಷ ದಿನಗಳನ್ನು ಮಾತ್ರ ಮೇಲುಕೋಟೆಗೆ ಆಗಮಿಸಿ ಪೂಜಾ ಕೈಮ್ಕರ್ಯಗಳಲ್ಲಿ ತೊಡಗುತ್ತಿದ್ದರು. ಕಾಶ್ಮೀರದಲ್ಲಿ ಶ್ರೀ ಶಂಕರಾಚಾರ್ಯರು ಮತ್ತು ಶ್ರೀ ರಾಮಾನುಜಾಚಾರ್ಯರು ಸಂಚಾರ ಮಾಡಿದ್ದರಿಂದ ಶೃಂಗೇರಿ ಮಠದ ವತಿಯಿಂದ ಅಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ, ಯತಿರಾಜ ಜಿಯರ್ ಅವರು ಭಾರತ ಸರ್ಕಾರದ ಅನುಮತಿ ಮೇರೆಗೆ ಅಲ್ಲಿಗೆ ತೆರಳಿ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. 

ಪೌರತ್ವ ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ: ಸಂಸದ ಮುನಿಸ್ವಾಮಿ

ಆ ಸಮಯದಲ್ಲಿ ಕಾಶ್ಮೀರ ಸರಸ್ವತಿಯ ನೆಲೆವೀಡು. ಭಾರತದ ಅವಿಭಾಜ್ಯ ಅಂಗ ಎಂದು ರಾಮಾನು ಜಿಯರ್ ಹೇಳಿದ್ದರು. ಈ ಮಾತಿನಿಂದ ಕೆರಳಿದ ಪಿಎಫ್ಐ ಸಂಘಟನೆ ಅವರಿಗೆ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಕರೆ ಹಾಕಿದ್ದು ಎಂದು ಹೇಳಲಾಗಿದೆ. ಈ ಕಾರಣದಿಂದ ರಾಮಾನುಜ ಜಿಯರ್ ಅವರಿಗೆ ವೈ ಮಾದರಿ ಭದ್ರತೆಯನ್ನು ನೀಡುವಂತೆ ಭಾರತ ಸರ್ಕಾರ ಸೂಚಿಸಿದೆ.

click me!