ರಾಜ್ಯದಲ್ಲಿ ಬೊಕ್ಕಸ ಖಾಲಿ ಆಗಿದೆ ಎಂದು ಹಲವು ರಾಜಕೀಯ ಮುಖಂಡರು ಹೆಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ರಾಜಕೀಯ ಬೊಕ್ಕಸ ಖಾಲಿ ಹೇಳಿಕೆಗಳ ಬಗ್ಗೆ ಸಿದ್ದರಾಮ್ಯ ಏನು ಹೇಳಿದ್ದಾರೆ ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.
ಮಂಗಳೂರು(ಅ.05): ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣವನ್ನು ಖರ್ಚು ಮಾಡಿರಬೇಕು. ಖಜಾನೆಯಲ್ಲಿ ಹಣವಿಲ್ಲ ಅಂತಾರೆ, ಅವರಿಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯ ಮಾಡಿದ್ದಾರೆ.
ರಾಜ್ಯದಲ್ಲಿ ಬೊಕ್ಕಸ ಖಾಲಿ ಆಗಿದೆ ಎಂದು ಹಲವು ರಾಜಕೀಯ ಮುಖಂಡರು ಹೆಳಿಕೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮೋದಿಯದ್ದು ಹಿಟ್ಲರ್ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ
ಯಡಿಯೂರಪ್ಪ ಅವರಿಗೆ ಹಣಕಾಸಿನ ಬಗ್ಗೆ ಜ್ಞಾನ ಇಲ್ಲಾ ಅನ್ಸುತ್ತೆ. ಖಜಾನೆಯಲ್ಲಿ ಹಣ ಖಾಲಿ ಆಗೋಕೆ ಚಾನ್ಸೇ ಇಲ್ಲ. ಯಾಕಂದ್ರೆ ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗುತ್ತೆ ಎಂದು ಅವರು ತಿಳಿಸಿದ್ದಾರೆ.
ವಿಪಕ್ಷ ನಾಯಕ ಆಯ್ಕೆ
ರಾಜ್ಯದಲ್ಲಿ ವಿಪಕ್ಷ ನಾಯಕ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇಂದು ಮಧುಸೂದನ್ ಮಿಸ್ತ್ರಿ ರಾಜ್ಯಕ್ಕೆ ಆಗಮನ ವಿಚಾರ ನನಗೆ ಗೊತ್ತಿಲ್ಲ.ನನಗೆ ಅವ್ರು ಬರ್ತೀರೋದೆ ಗೊತ್ತಿಲ್ಲ ಎಂದಿದ್ದಾರೆ. ಚಿಕ್ಕಮಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಸಿದ್ದರಾಮಯ್ಯ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದಾರೆ.
ಸಾಂಪ್ರದಾಯಿಕ ವರ್ಸಸ್ ಪ್ರವಾಸೋದ್ಯಮ ದಸರಾ