ಉಡುಪಿ: ಯಕ್ಷಗಾನ ಕಲಾವಿದರ ಸಮಾವೇಶ, ಯಕ್ಷರಂಗದ ಹೊಸ ಸಾಧ್ಯತೆಗಳ ಕುರಿತು ಸಮಾಲೋಚನೆ

Published : Jun 02, 2023, 01:25 PM IST
ಉಡುಪಿ: ಯಕ್ಷಗಾನ ಕಲಾವಿದರ ಸಮಾವೇಶ, ಯಕ್ಷರಂಗದ ಹೊಸ ಸಾಧ್ಯತೆಗಳ ಕುರಿತು ಸಮಾಲೋಚನೆ

ಸಾರಾಂಶ

ಪ್ರೊ. ಎಂ. ಎಲ್. ಸಾಮಗರ ಅಧ್ಯಕ್ಷತೆಯಲ್ಲಿ ಕಾಲಮಿತಿ ಪ್ರದರ್ಶನ-ಸುಖ ಕಷ್ಟ ಎಂಬ ವಿಷಯದ ಕುರಿತು ಅನಿಸಿಕೆಯ ಅಭಿವ್ಯಕ್ತಿ ಕಾರ್ಯಕ್ರಮ ಜರಗಿತು.

ಉಡುಪಿ(ಜೂ.02):  ಉಡುಪಿಯ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯಕ್ಷನಿಧಿ ಕಲಾವಿದರ 2023ರ ಸಮಾವೇಶವು ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಇಂದು(ಶುಕ್ರವಾರ) ಸಂಪನ್ನಗೊಂಡಿತು.

ಈ ಸಮಾವೇಶವನ್ನು ಖ್ಯಾತ ಕಥಕ್ ಕಲಾವಿದೆ ವಿದುಷಿ ಮಧು ನಟರಾಜ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅದಮಾರು ಎಜುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಡಾ.ಎ.ಪಿ.ಭಟ್, ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈ, ಕೊಂಡದಕುಳಿ ರಾಮಚಂದ್ರ ಹೆಗಡೆ, ಸರಪಾಡಿ ಅಶೋಕ್ ಶೆಟ್ಟಿ, ಕೆ. ಸದಾಶಿವರ್ ರಾವ್ ಉಪಸ್ಥಿತರಿದ್ದರು. 

ಉಡುಪಿ: 10 ಕೆಜಿ ಉಚಿತ ಅಕ್ಕಿ ಯೋಜನೆ ಜಾರಿಗೆ ಕೇಂದ್ರದ ಮೊರೆ ಹೋಗಿರುವುದು ವಿಪರ್ಯಾಸ, ಕುಯಿಲಾಡಿ

ಉದ್ಘಾಟನೆಯ ಬಳಿಕ ವಿದುಷಿ ಮಧು ನಟರಾಜ ತಂಡದವರಿಂದ ಕಥಕ್ ನೃತ್ಯದ ಪ್ರಾತ್ಯಕ್ಷಿಕೆ ಮತ್ತು ಸಂವಾದ ಕಾರ್ಯಕ್ರಮ ಜರಗಿತು. ಸಂವಾದದಲ್ಲಿ ಕೊಂಡದಕುಳಿ ರಾಮಚಂದ್ರ ಹೆಗಡೆ, ಪ್ರತಿಭಾ ಎಂ.ಎಲ್. ಸಾಮಗ, ಆರ್ಗೋಡು ಮೋಹನದಾಸ್ ಶೆಣೈ, ಪಾಲ್ಗೊಂಡರು. ಶ್ರೀಮತಿ ವಿದ್ಯಾಪ್ರಸಾದ್ ನಿರೂಪಿಸಿದರು.

ಪೂರ್ವಾಹ್ನ 8.30 ರಿಂದ ಡಾ. ಶೈಲಜಾ, ಡಾ. ರಾಜೇಶ್ ನಾವುಡ ಹಾಗೂ ಡಾ. ಸುನೀಲ್ ಮುಂಡ್ಕೂರ್ ತಂಡದವರಿಂದ ಕಲಾವಿದರ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು. ಅಪರಾಹ್ನ 12.00 ಗಂಟೆಯಿಂದ ಪ್ರೊ. ಎಂ. ಎಲ್. ಸಾಮಗರ ಅಧ್ಯಕ್ಷತೆಯಲ್ಲಿ ಕಾಲಮಿತಿ ಪ್ರದರ್ಶನ-ಸುಖ ಕಷ್ಟ ಎಂಬ ವಿಷಯದ ಕುರಿತು ಅನಿಸಿಕೆಯ ಅಭಿವ್ಯಕ್ತಿ ಕಾರ್ಯಕ್ರಮ ಜರಗಿತು. ಡಾ. ಜಿ.ಎಲ್. ಹೆಗಡೆ ಅಭ್ಯಾಗತರಾಗಿ ಭಾಗವಹಿಸಿದ್ದರು.

ಕಲಾವಿದರುಗಳಾದ ನೀಲ್ಕೋಡು ಶಂಕರ ಹೆಗಡೆ, ವಾಸುದೇವ ರಂಗಾ ಭಟ್ ಆಜ್ರಿ ಗೋಪಾಲ ಗಾಣಿಗ, ಸರಪಾಡಿ ಅಶೋಕ್ ಶೆಟ್ಟಿ, ಮಾಧವ ನಾಗೂರು, ತಾರಾನಾಥ ವರ್ಕಾಡಿ, ರಾಘವೇಂದ್ರ ಮಯ್ಯ, ಲಕ್ಷ್ಮಣ ಮರಕಡ, ನರಸಿಂಹ ಚಿಟ್ಟಾಣಿ, ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಹಾಗೂ ಆರ್ಗೋಡು ಮೋಹನದಾಸ್ ಶೆಣೈ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. 

ಡಾ. ಜೆ. ಎನ್. ಭಟ್ ಕಲಾವಿದರ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಕಿವಿಮಾತುಗಳನ್ನು ಹೇಳಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಲಾವಿದರಿಗೆ ಶುಭಹಾರೈಸಿದರು.

ಹಿಜಾಬ್‌ ಬಗ್ಗೆ ಸಾಹಿತಿಗಳಿಂದ ಅನಗತ್ಯ ಗೊಂದಲ: ಶಾಸಕ ಯಶ್ಪಾಲ್‌ ಗರಂ

ಸಮಾವೇಶದ ಪ್ರಧಾನ ಸಮಾರಂಭ ಅಪರಾಹ್ನ 2.30ಕ್ಕೆ ಶಾಸಕ ಯಶಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿತು. ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಪಿ. ಪುರುಷೋತ್ತಮ ಶೆಟ್ಟಿ, ಕೆನರಾ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್, ಯಕ್ಷಗಾನ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಡಾ. ಜಿ. ಎಲ್ ಹೆಗಡೆ, ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಕೋಟ್ಯಾನ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ ಉಪಸ್ಥಿತರಿದ್ದರು. ಯಕ್ಷನಿಧಿಗೆ ದೊಡ್ಡ ಮೊತ್ತ ನೀಡಿದ ಕಲಾವಿದ ನೀಲ್ಕೋಡು ಶಂಕರ ಹೆಗಡೆಯವರನ್ನು ಗೌರವಿಸಲಾಯಿತು. 17 ಮಂದಿ ಕಲಾವಿದರಿಗೆ ಗೃಹನಿರ್ಮಾಣ ಉಡುಗೊರೆಯಾಗಿ ತಲಾ ರೂ. 10,000/- ದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. 

ಆರಂಭದಲ್ಲಿ ವರದಿ ವರ್ಷದಲ್ಲಿ ಅಗಲಿದೆ ಹದಿನೇಳು ಕಲಾವಿದರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸುಮಾರು 40 ವೃತ್ತಿಮೇಳಗಳ 650 ಯಕ್ಷನಿಧಿಯ ಸದಸ್ಯ ಕಲಾವಿದರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದರು.ಕೊನೆಗೆ ಎಲ್ಲರಿಗೂ ಉಪಯುಕ್ತ ಉಡುಗೊರೆ ವಿತರಿಸಲಾಯಿತು.

PREV
Read more Articles on
click me!

Recommended Stories

ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!