ವಿಶ್ವನಾಥ್, ನಾರಾಯಣಗೌಡ, ಗೋಪಾಲಯ್ಯ ರಾಜೀನಾಮೆಗೆ ಕಾರಣ ಯಾರು?

By Web DeskFirst Published Aug 26, 2019, 11:21 AM IST
Highlights

ಹಾಲು ಕುಡಿದ ಮಕ್ಕಳೆ ಬದುಕಲ್ಲ, ಇನ್ನು ವಿಷ ಕುಡಿದವರು ಬದುಕ್ತಾರಾ, ಜೆಡಿಎಸ್ ಶಾಸಕರಾಗಿದ್ದ ಮೂವರನ್ನು ರಾಜೀನಾಮೆ ಕೊಡಿಸಿ ಮುಂಬೈಗೆ ಕಳಿಸಿದ್ದು ಯಾರು ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. 

ಹುಬ್ಬಳ್ಳಿ (ಆ.26) : ಯಡಿಯೂರಪ್ಪ ಸರ್ಕಾರ ಹೆಚ್ಚು ದಿನ ಇರುತ್ತದೆ ಎಂದು ಯಾರಿಗೂ ನಂಬಿಕೆ ಇಲ್ಲ.ರೆಬೆಲ್ಸ್ ಗಳನ್ನು ಇಟ್ಟುಕೊಂಡು ಸರ್ಕಾರ ರಚಿಸಲು ಆಗುತ್ತಾ ಎಂದು ಮಾಜಿ ಸಿಎಂ ಸಿದ್ದರಾಮಮಯ್ಯ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಗೆ ತೆರಳಿ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆಯಲ್ಲಿ ತೊಡಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿ ಹಾಲು ಕುಡಿದ ಮಕ್ಕಳೆ ಬದುಲ್ಲ, ಇನ್ನು ವಿಷ ಕುಡಿದವರು ಬದಕ್ತಾರಾ? ಎಂದು ಸಿದ್ದರಾಮಯ್ಯ ಹೇಳಿದರು.
 
ಇನ್ನು ದೇವೇಗೌಡರ ಕುಟುಂಬದ ಆರೋಪದ ಬಗ್ಗೆಯೂ ಪ್ರತಿಕ್ರಿಯಿಸಿದ ಮಾಜಿ ಸಿಎಂ, ನಾನು ಸುದೀರ್ಘವಾಗಿ ಉತ್ತರ ಕೊಟ್ಟಿದ್ದೇನೆ.ಬೈರತಿ, ಸೋಮಶೇಖರ್ ಅವರನ್ನು ಮುಂಬೈಗೆ ಕಳುಹಿಸಿದ್ದೇನೆ ಅಂತಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ, ಗೋಪಾಲಯ್ಯ ಕಳಿಸಿದ್ದು ಯಾರು ಎಂದರು. 

ರಾಜ್ಯ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೆಚ್ ಡಿಕೆ. ಹೆಚ್ ಡಿಡಿ ನನ್ನ ಮೇಲೆ ಗೂಬೆ ಕೂರಿಸಲು‌ ನೋಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಸಚಿವರು ನೆರೆ ಪೀಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು.ಆದರೆ ದೆಹಲಿ-ಬೆಂಗಳೂರು-ದೆಹಲಿ ಮಧ್ಯೆ ಟೂರ್ ಮಾಡುತ್ತಿದ್ದಾರೆ. ಭಾರಿ ಪ್ರಮಾಣದಲ್ಲಿ ನೆರೆ ಹಾನಿಯಾದರೂ ಕೇಂದ್ರ ಸೂಕ್ತ ಪರಿಹಾರ ತರುವಲ್ಲಿ ಸರ್ಕಾರ ಕೆಲಸ ಮಾಡಿಲ್ಲ. ಇನ್ನು ರಾಜ್ಯದಲ್ಲಿ ಬಿಜೆಪಿಯವರು ವಾಮ ಮಾರ್ಗದಿಂದ ಸರ್ಕಾರ ರಚನೆ ಮಾಡಿದ್ದಾರೆ. ಈಗಲಾದರೂ ಜನರ ಕಡೆ ನೋಡಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಸದ್ಯ ಚರ್ಚೆಯಾಗುತ್ತಿದ್ದು,  ಈ ಬಗ್ಗೆ ನನಗೇನು ಗೊತ್ತಿಲ್ಲ. ಇಂದು ರಾಜ್ಯಕ್ಕೆ ಗುಲಾಮ್‌ ನಬಿ ಅಜಾದ್ ಆಗಮಿಸಲಿದ್ದಾರೆ. ವರು ಈ ಬಗ್ಗೆ ಚರ್ಚೆ ನಡೆಸುತ್ತಾರೆ. ನಾನು ಸದ್ಯ ಪ್ರವಾಹ ಪೀಡಿತ ಪ್ರದೇಶಗಳ ಭೇಟಿಯಲ್ಲಿದ್ದೇನೆ ಎಂದರು.

click me!