ಹಳದಿ ಮಾರ್ಗ : 9 ಮೆಟ್ರೋ ನಿಲ್ದಾಣ ಬಳಿ ಹೊಸ ಬಿಎಂಟಿಸಿ ನಿಲ್ದಾಣ

Kannadaprabha News   | Kannada Prabha
Published : Dec 18, 2025, 06:47 AM IST
Namma Metro

ಸಾರಾಂಶ

ಹೆಚ್ಚಿನ ಪ್ರಯಾಣಿಕರು ನಮ್ಮ ಮೆಟ್ರೋ ಬಳಸುವಂತಾಗಲು ಕೊನೆ ಮೈಲಿ ಸಂಪರ್ಕ ಉತ್ತಮಗೊಳಿಸುವ ಉದ್ದೇಶದಿಂದ ಆರ್‌.ವಿ. ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಮಾರ್ಗದಲ್ಲಿನ 9 ಮೆಟ್ರೋ ನಿಲ್ದಾಣಗಳ ಸಮೀಪ ಹೊಸ ಬಿಎಂಟಿಸಿ ಬಸ್​​​ ನಿಲ್ದಾಣ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು : ಹೆಚ್ಚಿನ ಪ್ರಯಾಣಿಕರು ನಮ್ಮ ಮೆಟ್ರೋ ಬಳಸುವಂತಾಗಲು ಕೊನೆ ಮೈಲಿ ಸಂಪರ್ಕ ಉತ್ತಮಗೊಳಿಸುವ ಉದ್ದೇಶದಿಂದ ಆರ್‌.ವಿ. ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಮಾರ್ಗದಲ್ಲಿನ 9 ಮೆಟ್ರೋ ನಿಲ್ದಾಣಗಳ ಸಮೀಪ ಹೊಸ ಬಿಎಂಟಿಸಿ ಬಸ್​​​ ನಿಲ್ದಾಣ ವ್ಯವಸ್ಥೆ ಮಾಡಲಾಗಿದೆ.

ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ

ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ಮತ್ತು ಬಿಎಂಟಿಸಿ ಸಂಯುಕ್ತವಾಗಿ ಮಾರ್ಗ ಪರಿಶೀಲನೆ ನಡೆಸಿ ಮೆಟ್ರೋ ನಿಲ್ದಾಣಗಳ ಸಮೀಪ ಬಸ್ ನಿಲ್ದಾಣಗಳನ್ನು ಹೊಸದಾಗಿ ಸ್ಥಾಪಿಸಲಾಗಿದೆ. ಹಾಗೂ ಕೆಲವು ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲಾಗಿದೆ.

ಮೆಟ್ರೋ ನಿಲ್ದಾಣದ ಬಳಿ ಸ್ಥಳಾಂತರಿಸಲಾಗಿದೆ

ಹೆಬ್ಬಗೋಡಿ, ಬೆರೆಟೇನ ಅಗ್ರಹಾರ, ಸಿಂಗಸಂದ್ರ, ಹೊಂಗಸಂದ್ರ, ಸೆಂಟ್ರಲ್ ಸಿಲ್ಕ್ ಬೋರ್ಡ್​, ಆ‌ರ್.ವಿ. ರಸ್ತೆ ಮೆಟ್ರೋ ನಿಲ್ದಾಣಗಳ ಸಮೀಪ ಹೊಸದಾಗಿ ಬಸ್‌ ನಿಲ್ದಾಣವನ್ನು ಹೊಸದಾಗಿ ಸ್ಥಾಪಿಸಲಾಗಿದೆ. 100 ಮೀಟರ್‌ಗೂ ದೂರವಿದ್ದ ಬಸ್‌ ನಿಲ್ದಾಣಗಳನ್ನು ಎಲೆಕ್ಟ್ರಾನಿಕ್ ಸಿಟಿ, ಹೊಸ ರಸ್ತೆ, ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಸ್ಥಳಾಂತರಿಸಲಾಗಿದೆ.

ಜಯದೇವ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಕುಡ್ಡು ಗೇಟ್ ಹಾಗೂ ಇನ್ಫೋಸಿಸ್ ಫೌಂಡೇಶನ್, ಕೋಣಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಗಳ 100 ಮೀಟರ್ ಒಳಗೆ ಈಗಾಗಲೇ ಬಸ್‌ ನಿಲ್ದಾಣ ಲಭ್ಯವಿವೆ. ಹಸ್ಕೂರು ರಸ್ತೆ ಮತ್ತು ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳದ ಕೊರತೆಯಿಂದಾಗಿ ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಮೆಟ್ರೋ ಪ್ರಯಾಣಿಕರು ಈ ಸುಧಾರಿತ ಬಸ್ ಸಂಪರ್ಕದ ಸದುಪಯೋಗ ಪಡಿಸಿಕೊಳ್ಳುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮನವಿ ಮಾಡಿದೆ.

PREV
Read more Articles on
click me!

Recommended Stories

ಕಾರವಾರಕ್ಕೆ ಸೀಗಲ್‌ ಹಕ್ಕಿ ಕಳಿಸಿ ಚೀನಾ ಬೇಹುಗಾರಿಕೆ?
ಸುಳ್ಳು ವರದಕ್ಷಿಣೆ ಕೇಸ್ ಹಾಕಿದ್ದ ಮಹಿಳೆಗೆ ಹೈಕೋರ್ಟ್ ತಪರಾಕಿ! ಏನಿದು ಪ್ರಕರಣ?