ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ; ಹೆಚ್ಚುವರಿ ಪ್ರಯಾಣಿಕರ ದಟ್ಟಣೆ

Published : Feb 24, 2026, 07:36 AM IST
Talaguppa

ಸಾರಾಂಶ

ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. 

ಬೆಂಗಳೂರು: ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು

ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು (06587) ಫೆಬ್ರವರಿ 27 ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಫೆ. 28) ಬೆಳಿಗ್ಗೆ 5.05ಕ್ಕೆ ತಾಳಗುಪ್ಪ ತಲುಪಲಿದೆ. ಹಿಂದಿರುಗುವ ರೈಲು (06588) ತಾಳಗುಪ್ಪ - ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಫೆ. 28ರಂದು ಬೆಳಗ್ಗೆ 9.30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ಸೇರಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿ ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ, 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ.

ಈ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

2ನೇ ರೈಲಿನ ಮಾಹಿತಿ

ಯಶವಂತಪುರ-ಶಿವಮೊಗ್ಗ ಟೌನ್ ನಡುವೆ ಸಂಚರಿಸುವ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಿದೆ. ಮಾರ್ಚ್ 1ರಂದು (ಭಾನುವಾರ) ಯಶವಂತಪುರದಿಂದ ಹೊರಡುವ ರೈಲು ಶಿವಮೊಗ್ಗದ ಬದಲಾಗಿ ತಾಳಗುಪ್ಪದವರೆಗೆ ಸಂಚರಿಸಲಿದೆ. ಮರಳಿ, ಶಿವಮೊಗ್ಗಕ್ಕೆ ಬದಲಾಗಿ ತಾಳಗುಪ್ಪದಿಂದಲೇ ತನ್ನ ಪ್ರಯಾಣ ಆರಂಭಿಸಲಿದೆ. ಈ ವಿಸ್ತರಣೆ ಕೇವಲ ಒಂದು ಟ್ರಿಪ್ ಗೆ ಮಾತ್ರ ಅನ್ವಯಿಸಲಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯನ್ನ ಕೊಂದ ಅನ್ಯಕೋಮಿನ ಮೂವರು ವಿದ್ಯಾರ್ಥಿಗಳು

ಯಶವಂತಪುರದಿಂದ ರೈಲು (16581) ಮಧ್ಯರಾತ್ರಿ 12.15ಕ್ಕೆ ಹೊರಟು, ಅಂದು ಬೆಳಗ್ಗೆ 9 ಗಂಟೆಗೆ ತಾಳಗುಪ್ಪ ತಲುಪಲಿದೆ. ವಾಪಸ್ಸಾಗುವ ರೈಲು (16582) ತಾಳಗುಪ್ಪದಿಂದ ರಾತ್ರಿ 10 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 4.45ಕ್ಕೆ ಯಶವಂತಪುರ ತಲುಪಲಿದೆ.

ಶಿವಮೊಗ್ಗ ಟೌನ್‌ನಿಂದ ಮುಂದಕ್ಕೆ ಈ ರೈಲು ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.

ಇದನ್ನೂ ಓದಿ: ಮೇ ತಿಂಗಳೊಳಗೆ ಹಸಿರುಮಕ್ಕಿ ಸೇತುವೆ ಉದ್ಘಾಟನೆ : ಸಚಿವ ಸತೀಶ್‌ ಜಾರಕಿಹೊಳಿ

PREV
Read more Articles on
click me!

Recommended Stories

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯನ್ನ ಕೊಂದ ಅನ್ಯಕೋಮಿನ ಮೂವರು ವಿದ್ಯಾರ್ಥಿಗಳು
ಮೇ ತಿಂಗಳೊಳಗೆ ಹಸಿರುಮಕ್ಕಿ ಸೇತುವೆ ಉದ್ಘಾಟನೆ : ಸಚಿವ ಸತೀಶ್‌ ಜಾರಕಿಹೊಳಿ