'ಮುಂದಿನ ವರ್ಷ ಎತ್ತಿನಹೊಳೆ ಯೋಜನೆ ಪೂರ್ಣ'..!

Suvarna News   | Asianet News
Published : Jun 18, 2020, 02:30 PM ISTUpdated : Jun 18, 2020, 02:32 PM IST
'ಮುಂದಿನ ವರ್ಷ ಎತ್ತಿನಹೊಳೆ ಯೋಜನೆ ಪೂರ್ಣ'..!

ಸಾರಾಂಶ

ತುಮಕೂರು, ಚಿಕ್ಕಬಳ್ಳಾಪುರ ಸೇರಿ ಹಲವು ಜಿಲ್ಲೆಗಳಿಗೆ ನೀರು ಹರಿಸಲಿರುವ ಬಹು ಆಕಾಂಕ್ಷಿ ಎತ್ತಿನಹೊಳೆ ಯೋಜನೆ ಮುಂದಿನ ವರ್ಷ ಪೂರ್ನಗೊಳ್ಳಲಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಹಾಸನ(ಜೂ.18): ತುಮಕೂರು, ಚಿಕ್ಕಬಳ್ಳಾಪುರ ಸೇರಿ ಹಲವು ಜಿಲ್ಲೆಗಳಿಗೆ ನೀರು ಹರಿಸಲಿರುವ ಬಹು ಆಕಾಂಕ್ಷಿ ಎತ್ತಿನಹೊಳೆ ಯೋಜನೆ ಮುಂದಿನ ವರ್ಷ ಪೂರ್ನಗೊಳ್ಳಲಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಸಕಲೇಶಪುರದ ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರದೇಶ ವೀಕ್ಷಣೆ ಬಳಿಕ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಮುಂದಿನ ವರ್ಷ ಪೂರ್ಣಗೊಳ್ಳಲಿದೆ. ಈಗಾಗಲೆ ಶೇಕಡಾ 85 ರಷ್ಟು ಕಾಮಗಾರಿ ಮುಗಿದಿದೆ ಎಂದಿದ್ದಾರೆ.

ರಾಜಬೀದಿಗಳಲ್ಲಿ ಗದೆ ಹಿಡಿದು‌ ಜನರ ಬೆದರಿಸಿದ ಯಮರಾಯ..!

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಎತ್ತಿನಹೊಳೆ ಪ್ರದೇಶದಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ಸಚಿವ 2021ರ ಮಾರ್ಚ್ ವೇಳೆಗೆ ಯೋಜನೆಯ ಮೊದಲ ಹಂತದ ಕಾಮಗಾರಿ ಮುಗಿಯಲಿದೆ ಎಂದು ಭರವಸೆ ನೀಡಿದ್ದಾರೆ.

ಎತ್ತಿನಹೊಳೆ ಯೋಜನೆ ಕುರಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿ ರಾಜ್ಯದ ಏಳು ಜಿಲ್ಲೆಗಳಿಗೆ ಉಪಯುಕ್ತ ಯೋಜನೆ ಇದಾಗಿದ್ದು, ಮಳೆಗಾಲದಲ್ಲಿ 24 ಟಿಎಂಸಿ ಕುಡಿಯುವ ನೀರನ್ನ ಬಯಲು ಸೀಮೆಗೆ ಹರಿಸಲಾಗುತ್ತದೆ.

ಎತ್ತಿನ ಹೊಳೆ ಯೋಜನೆಗೆ ಹಸಿರು ನ್ಯಾಯಾಧಿಕರಣ ಅಸ್ತು

ಕೊರೊನ ಭೀತಿ ಹಿನ್ನೆಲೆಯಲ್ಲಿ  ಕಾರ್ಮಿಕರು ವಾಪಸ್ ತೆರಳಿದ್ದಾರೆ. ಕಾರ್ಮಿಕರ ಕೊರತೆಯಿಂದ ಕಾಮಗಾರಿ ವಿಳಂಬವಾಗುತ್ತಿದೆ. ಮಳೆಗಾಲ‌ ಮುಗಿದ ಬಳಿಕ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ಸಚಿವ ಗೋಪಾಲಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ