ತಂತಿ ನಡಿಗೆ: ವಯಸ್ಸಾಗಿದೆ, ಜಾರಿ ಬಿದ್ದೀರಿ..! ಬಿಎಸ್‌ವೈಗೆ ಸಿದ್ದು ಟಾಂಗ್..!

By Kannadaprabha News  |  First Published Oct 6, 2019, 12:43 PM IST

ತಂತಿ ನಡಿಗೆ ಬಗ್ಗೆ ಸಿಎಂ ಬಿ. ಎಸ್. ಯಡಿಯೂರಪ್ಪ ನೀಡಿರೋ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಯಸ್ಸಾಯ್ತು. ಜಾರಿ ಬೀಳ್ತೀರಿ ಅಂತ ಸಿದ್ದರಾಮಯ್ಯ ಬಿಎಸ್‌ವೈಗೆ ಟಾಂಗ್ ನೀಡಿದ್ದಾರೆ.


ಮಂಗಳೂರು(ಅ.06): ತಂತಿ ನಡಿಗೆ ಬಗ್ಗೆ ಸಿಎಂ ಬಿ. ಎಸ್. ಯಡಿಯೂರಪ್ಪ ನೀಡಿರೋ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಯಸ್ಸಾಯ್ತು. ಜಾರಿ ಬೀಳ್ತೀರಿ ಅಂತ ಸಿದ್ದರಾಮಯ್ಯ ಬಿಎಸ್‌ವೈಗೆ ಟಾಂಗ್ ನೀಡಿದ್ದಾರೆ.

‘ನನಗೆ ತಂತಿ ಮೇಲೆ ನಡೆಯುವಂತಹ ಪರಿಸ್ಥಿತಿ ಇದೆ’ ಎಂದು ಯಡಿಯೂರಪ್ಪ ಹೇಳುತ್ತಿದ್ದಾರೆ. ಯಡಿಯೂರಪ್ಪನವರೇ ಬೇಡ. ಹಾಗೆ ನಡೆಯಬೇಡಿ. ವಯಸ್ಸಾಗಿದೆ ಜಾರಿ ಬೀಳುತ್ತೀರಿ’ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

Tap to resize

Latest Videos

undefined

ಮಾಜಿ ಸಚಿವರಾದ ಬಿ. ರಮಾನಾಥ ರೈ, ಯು.ಟಿ. ಖಾದರ್‌, ಕೆ. ಅಭಯಚಂದ್ರ ಜೈನ್‌, ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೊ, ಮೂಡುಬಿದಿರೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಲೇರಿಯನ್‌ ಸಿಕ್ವೇರ, ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಮೂಡಾ ಮಾಜಿ ಅಧ್ಯಕ್ಷ ರತ್ನಾಕರ ಸಿ., ಪುರಸಭಾ ಸದಸ್ಯರಾದ ಪಿ.ಕೆ. ಥಾಮಸ್‌, ಸುರೇಶ ಪ್ರಭು, ಕೊರಗಪ್ಪ. ಕರೀಂ ಇದ್ದರು.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್‌ ಅವರ ನಿವಾಸಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು. ಮಾಜಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ ಖಾದರ್‌, ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

you are old, may slip and fall down siddaramaiah taunts bs yediyurappa 

click me!