
ಧಾರವಾಡ(ಡಿ.31): ಮದುವೆಗೆ ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. ಸಂತೋಷ್ ಕೊರಡಿ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ.
ವಯಸ್ಸಾದರೂ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಬೇಸರವಾದ ಹಿನ್ನೆಲೆಯಲ್ಲಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತೀವ್ರವಾಗಿ ಮನನೊಂದ ಸಂತೋಷ್ ಗ್ರಾಮದ ಸ್ಮಶಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ: ಜೀವದ ಹಂಗು ತೊರೆದು ಅಜ್ಜಿ ರಕ್ಷಿಸಿದ ಯುವಕ..!
ಆತ್ಮಹತ್ಯೆಗೆ ಯತ್ನಿಸುವದನ್ನ ಕಂಡ ಸ್ಥಳೀಯರು ಸಂತೋಷ್‌ನನ್ನ ರಕ್ಷಿಸಿದ್ದಾರೆ. ಸದ್ಯ ಸುಟ್ಟ ಗಾಯಗಳಿಂದಾಗಿ ಸಂತೋಷ್‌ನನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.