ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ| ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು|
ಹಗರಿಬೊಮ್ಮನಹಳ್ಳಿ(ಸೆ.10): ಯುವಕನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸೊನ್ನ ಗ್ರಾಮದ ನಿವಾಸಿ ಬಡಿಗೇರ್ ಸಿದ್ದೇಶ (22) ಎಂಬುವನೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಮೃತ ಬಡಿಗೇರ್ ಸಿದ್ದೇಶ ಬಹುದಿನಗಳಿಂದ ಮೂರ್ಛೆ ರ್‍ರೋಗ ಮತ್ತು ಮೂಲವ್ಯಾಧಿ ಕಾಯಿಲೆಗಳಿಂದ ಬಳಲುತ್ತಿದ್ದು, ಇದರಿಂದ ಜಿಗುಪ್ಸೆ ಹೊಂದಿದ್ದನೆಂದು ಎಂದು ಹೇಳಲಾಗುತ್ತಿದೆ. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ವಿಷ ಸೇವಿಸಿದ್ದಾನೆ.
ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ!
ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆ ಫಲಕಾರಿಯಾಗದೆ, ಮಧ್ಯರಾತ್ರಿ ಸಾವನ್ನಪ್ಪಿದ್ದಾನೆ ಎಂದು ಅವರ ತಂದೆ ಬಡಿಗೇರ್ ವೀರಣ್ಣ ನೀಡಿದ ಹೇಳಿಕೆ ಆಧರಿಸಿ ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.