ಮಂಡ್ಯ: ಉಕ್ಕಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ

By Girish Goudar  |  First Published Jul 20, 2024, 10:59 PM IST

ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನೀರಿನ ರಭಸಕ್ಕೆ ಯುವಕ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ.ವ್ಯಕ್ತವಾಗಿದೆ. 


ಮಂಡ್ಯ(ಜು.20): ಕಾವೇರಿ ನದಿಯಲ್ಲಿ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇಂದು(ಶನಿವಾರ) ನಡೆದಿದೆ. ಯುವಕ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. 

ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನೀರಿನ ರಭಸಕ್ಕೆ ಯುವಕ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ.ವ್ಯಕ್ತವಾಗಿದೆ. ಯುವಕನ ಬಗ್ಗೆ ಯಾವುದೇ ಮಾಹಿತಿ ಬಗ್ಗೆ ಲಭ್ಯವಾಗಿಲ್ಲ. 

Tap to resize

Latest Videos

undefined

 

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ..!

ದಡ ಸೇರಲಾಗದೆ ನದಿಯಲ್ಲಿ ಕೊಚ್ಚು ಹೋಗುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪ್ರವಾಸಿಗರೊಬ್ಬರು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

click me!