ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯಕ್ಕೆ ಬರಲಿ : ಎಂ.ಎನ್. ನಟರಾಜ್

By Kannadaprabha NewsFirst Published Mar 26, 2024, 10:37 AM IST
Highlights

ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ರಾಜಕೀಯಕ್ಕೆ ಬರಬೇಕು ಎಂದು ರಾಷ್ಟ್ರೀಯ ಯುವಜನ ಸಬಲೀಕರಣ ಇಲಾಖೆ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್ ಕರೆ ನೀಡಿದರು.

  ಮೈಸೂರು :  ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ರಾಜಕೀಯಕ್ಕೆ ಬರಬೇಕು ಎಂದು ರಾಷ್ಟ್ರೀಯ ಯುವಜನ ಸಬಲೀಕರಣ ಇಲಾಖೆ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್ ಕರೆ ನೀಡಿದರು.

ನಗರದ ಹೆಬ್ಬಾಳ್ ಹೊರ ವರ್ತುಲ ರಸ್ತೆಯಲ್ಲಿರುವ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕವು ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಇಂದು ಲೋಕಸಭಾ ಚುನಾವಣಾ ಸಮಯ ಯರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕಿದೆ. ನೀವೂ ಸುಭದ್ರ ಕ್ಕೆ ಜಾಗೃತಿಯಿಂದ ಮತದಾನ ಮಾಡಬೇಕಿದೆ. ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಹೆಚ್ಚಿನ ಮಂದಿ ರಾಜಕೀಯಕ್ಕೆ ಬರುವ ಮೂಲಕ ಜನ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದ ಸ್ವೀಪ್ ಜಿಲ್ಲಾ ಮಟ್ಟದ ಅಧಿಕಾರಿ ರೇಖಾ ಜೆ. ಶೆಟ್ಟಿ ಮಾತನಾಡಿ, ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತದಾನ ಹಾಗೂ ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದೆ. ಇದರಲ್ಲಿ ಸಂತಸದಿಂದ ಪಾಲ್ಗೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.

ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್ ಚಾವರೆ, ಎನ್ ವೈಕೆಎಸ್ ಲೆಕ್ಕಾಧಿಕಾರಿ ಸತೀಶ್ ಪಡೋಳ, ತಾಲೂಕು ಸಂಯೋಜನಾಧಿಕಾರಿ ಲಕ್ಷ್ಮಿಕಾಂತ್, ಕೃಪಲಾನಿ, ಕಾಲೇಜಿನ ಪ್ರಾಂಶುಪಾಲೆ ಡಾ.ಕೆ. ಸೌಮ್ಯ ಈರಪ್ಪ, ಎನ್ಎಸ್ಎಸ್ ಯೋಜನಾಧಿಕಾರಿ ಆರ್. ರಾಘವೇಂದ್ರ, ಯೋಗೇಶ್ ಮೊದಲಾದವರು ಇದ್ದರು.

click me!