ಉಡುಪಿ: ನಿಶ್ಚಿತಾರ್ಥದ ನಂತರ ಆತ್ಮಹತ್ಯೆಗೆ ಶರಣಾದ ಕೀರ್ತನಾ ಶೆಟ್ಟಿ

Published : Nov 20, 2024, 03:24 PM IST
ಉಡುಪಿ: ನಿಶ್ಚಿತಾರ್ಥದ ನಂತರ ಆತ್ಮಹತ್ಯೆಗೆ ಶರಣಾದ ಕೀರ್ತನಾ ಶೆಟ್ಟಿ

ಸಾರಾಂಶ

ಉಡುಪಿಯಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯುವತಿಯ ನಿಶ್ಚಿತಾರ್ಥ ಒಂದೂವರೆ ತಿಂಗಳ ಹಿಂದೆ ನೆರವೇರಿತ್ತು.

ಉಡುಪಿ (ನ.20): ಕೃಷ್ಣನಗರಿ ಉಡುಪಿಯಲ್ಲಿ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಮನೆಯವರು ನೋಡಿ ಆಕೆಯನ್ನು ಕಾಪಾಡಿದ್ದರು. ಆದರೆ, ನೇಣು ಬಿಗಿದುಕೊಂಡು ಅರೆ ಪ್ರಜ್ಞಾವಸ್ಥೆ ಸ್ಥಿತಿ ತಲುಪಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಡುಪಿ ನಗರದಲ್ಲಿ ನಡೆದಿದೆ.

ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಅವರ ಮನೆಯವರು ಯುವತಿಯನ್ನು ಕೂಡಲೇ ರಕ್ಷನೆ ಮಾಡಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ನ. 17ರಂದು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ರಾತ್ರೋ ರಾತ್ರಿ ಶಿವ, ಗಣೇಶ ದೇವಸ್ಥಾನ ನೆಲಸಮ ಮಾಡಿದ ಸರ್ಕಾರ!

ಇನ್ನು ಮೃತ ಯುವತಿ ಕೀರ್ತನಾ ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಮದುವೆ ನಿಶ್ಚಯ ಮಾಡಿ, ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವನ್ನು ಮಾಡಿದ್ದರು. ಮುಂದಿನ ಕೆಲವು ದಿನಗಳಲ್ಲಿ ಯುವತಿಗೆ ಮದುವೆ ಮಾಡುವುದಕ್ಕೆ ಮನೆಯಲ್ಲಿ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಆದರೆ, ಮದುವೆಗೂ ಮುನ್ನ ಯುವತಿ ನೇಣಿಗೆ ಕೊರಳೊಡ್ಡಿ ಆತ್ಮಯತ್ಯೆಗೆ ಯತ್ನಿಸಿದ್ದು, ಅದರಿಂದ ಕಾಪಾಡಿ ಚಿಕಿತ್ಸೆಗೆ ದಾಖಲಿಸಿದರೂ ಬದುಕುಳಿಯದೇ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.

PREV
click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು