ಇದೊಂದು ದಾಖಲೆ ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್ ಆಗಲಿದೆ ನಿಮ್ಮ ಹೆಸರು!

Published : Aug 31, 2026, 12:22 PM IST
gruha lakshmi scheme

ಸಾರಾಂಶ

ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸರ್ಕಾರವು ಬಯೋಮೆಟ್ರಿಕ್ ಮತ್ತು ಫೇಶಿಯಲ್ ಅಥೆಂಟಿಕೇಷನ್ ಮೂಲಕ ಮರುಪರಿಶೀಲನೆ ನಡೆಸುತ್ತಿದೆ. ಈ ಪ್ರಕ್ರಿಯೆಯಲ್ಲಿ, ಮತದಾರರ ಗುರುತಿನ ಚೀಟಿ ಇಲ್ಲದ ಫಲಾನುಭವಿಗಳ ಹೆಸರನ್ನು ಯೋಜನೆಯಿಂದ ತೆಗೆದುಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುವಿಗಳಲ್ಲಿ ಅರ್ಹರನ್ನು ಗುರುತಿಸಲು ಫಲಾನುವಿಗಳ ಬಯೋಮೆಟ್ರಿಕ್ ಮತ್ತು ಫೇಶಿಯಲ್ ಅಥೆಂಟಿಕೇಷನ್ ಮೂಲಕ ಮರುಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ. ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಮೂಲಕ ಅವರಿಗೆ ಆರ್ಥಿಕ ಶಕ್ತಿ ತುಂಬುವ ಯೋಜನೆಗೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವ ನಿರ್ಧಾರ ತೆಗೆದುಕೊಂಡಿದೆ.

ಗೃಹಲಕ್ಷ್ಮಿ: ಒಂದು ದಾಖಲೆ ಇಲ್ಲದಿದ್ದರೆ ಹೆಸರು ಡಿಲೀಟ್!

ಆಗಸ್ಟ್ 2023ರ ಆಗಸ್ಟ್‌ನಿಂದ ಈವರೆಗೂ 1.24 ಕೋಟಿ ಫಲಾನುಭವಿಗಳಿಗೆ 32 ಕಂತುಗಳಲ್ಲಿ 7,69,751.13 ಕೋಟಿ ರೂಪಾಯಿ ಸಹಾಯಧನ ಪಾವತಿಸಲಾಗಿದೆ. ಆದರೆ ಈ ಅವಧಿಯಲ್ಲಿ ಮರಣ ಹೊಂದಿದವರು ಹಾಗೂ, ವಲಸೆ ಹೋದವರು ಸೇರಿದಂತೆ ಅರ್ಹರಲ್ಲದವರಿಗೂ ಗೃಹಲಕ್ಷ್ಮಿ ಹಣ ಸಂದಾಯಾಗಿದೆ. ಈಗಾಗಿ ಸರ್ಕಾರ ಅನರ್ಹರನ್ನು ಕೈಬಿಟ್ಟು ಯೋಜನೆ ಮುಂದುವರಿಸಲು ಸರ್ಕಾರ ಮುಂದಾಗಿದೆ.

ಮತದಾರರ ಗುರುತಿನ ಚೀಟಿ ಕಡ್ಡಾಯ!

ಇದರೊಂದಿಗೆ ಇದೇ ವಾರದಿಂದ ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ ಆರಂಭ ಆಗಲಿದೆ ಎಂದು ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆ ಮನೆಗೆ ಹೋಗಿ ಗೃಹಲಕ್ಷ್ಮಿ ಫಲಾನುಭವಿಗಳ ಪರಿಶೀಲನೆ ನಡೆಯಲಿದ್ದು, ವೋಟರ್ ಐಡಿ ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಹೆಸರು ಡಿಲೀಟ್ ಆಗಲಿದೆ ಎಂದು ತಿಳಿಸಿದ್ದಾರೆ.

ಇದೇ ವಾರದಿಂದ ಗೃಹಲಕ್ಷ್ಮಿ ಮರುಪರಿಶೀಲನೆ ಪ್ರಕ್ರಿಯೆ ಆರಂಭ

ಹೌದು, ಚುನಾವಣಾ ಆಯೋಗ ನಡೆಸಿದ SIR ಪ್ರಕ್ರಿಯೆನಲ್ಲಿ ಹೆಸರು ಡಿಲೀಟ್ ಆಗಿದ್ದರೆ, ಗೃಹಲಕ್ಷ್ಮಿ ಯೋಜನೆಯಿಂದಲೂ ಫಲಾನುವಿಗಳ ಹೆಸರು ಡಿಲೀಟ್ ಆಗಲಿದೆ. ಪ್ರತಿ ಮನೆ ಮನೆಗೆ ಹೋಗಲಿರುವ ಸಿಬ್ಬಂದಿಗಳು, ಮರುಪರಿಶೀಲನೆ ವೇಳೆ ಫಲಾನುಭವಿಗಳ ದಾಖಲು ಸಂಗ್ರಹ ಮಾಡಲಿದ್ದಾರೆ. ಮನೆಯಲ್ಲೇ ಪೇಸ್ ರೆಕಗ್ನಿಷನ್, ಫೇಸ್ ರೆಕಗ್ನಿಷನ್ ಆಗದಿದ್ದರೆ ಬಯೋಮೆಟ್ರಿಕ್ ಕಡ್ಡಾಯ ಮಾಡಲಾಗಿದೆ. ಉಳಿದಂತೆ ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾ ಕೇಂದ್ರ, ಪಡಿತರ ಕೇಂದ್ರಗಳಲ್ಲಿ ಬಯೋ ಮೆಟ್ರಿಕ್ ಗೆ ಅವಕಾಶ ನೀಡಲಾಗಿದೆ. ಇದೇ ವಾರದಿಂದ ಗೃಹಲಕ್ಷ್ಮಿ ಮರುಪರಿಶೀಲನೆ ಪ್ರಕ್ರಿಯೆ ಆರಂಭ ಆಗಲಿದೆ ಎಂದು ವಿವರಿಸಿದ್ದಾರೆ.

ಹೇಗೆ ನಡೆಯುತ್ತೆ ಪರಿಶೀಲನೆ?

ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ಸ್ ಸರ್ವೀಸಸ್ ನಿರದೇಶನಾಲಯ ಅಭಿವೃದ್ಧಿಪಡಿಸಿರುವ ತಂತ್ರಾಂಶ ಮತ್ತು ಮೊಬೈಲ್ ಅಪ್ಲಿಕೇಷನ್ ಮೂಲಕ ಮನೆ ಮನೆ ಸಮೀಕ್ಷೆ ನಡೆಸಲಿದ್ದಾರೆ. ಇದಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮರು ಪರಿಶೀಲನಾ ಸಮೀಕ್ಷೆಯ ಮಾದರಿ ನಮೂನೆಗಳನ್ನು ಸಿದ್ಧಪಡಿಸಲಿದೆ. ಆ.30ರಿಂದ ಒಂದು ತಿಂಗಳೊಳಗೆ ಕ್ಷೇತ್ರ ಪರಿಶೀಲನೆ ಪೂರ್ಣಗೊಳಸಲಾಗುತ್ತದೆ. ಗ್ಯಾರಂಟಿ ಸಮಿತಿ ಸದಸ್ಯರು ಮತ್ತು ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ಗಣತಿ ನಮೂನೆ ವಿತರಸಲಿದ್ದು, ಫಲಾನುಭಿಗಳು ಅದನ್ನು ಭರ್ತಿ ಮಾಡಿ ಆಗಲೇ ವಾಪಸ್ ನೀಡಬೇಕು. ಈ ವೇಳೆ ಗಣತಿದಾರರು ಮೊಬೈಲ್ ಆಪ್ ಬಳಸಿ, ಫಲಾನುಭವಿಗಯ ಫೋಟೋ, ಮನೆಯ ಫೋಟೋ ಹಾಗೂ ಸ್ವಯಂಚಾಲಿತ ಜಿಪಿಎಸ್ ನಿರ್ದೇಶಾಂಕಗಳನ್ನು ಸೆರೆ ಹಿಡಿಯಲಿದ್ದಾರೆ.

ಈ ಹಿಂದೆ ಈ ಬಗ್ಗೆ ಮಾತನಾಡಿದ್ದ ಸಿಎಂ ಡಿಕೆ ಶಿವಕುಮಾರ್ ಅವರು, ಗೃಹಲಕ್ಷ್ಮಿ ಯೋಜನೆಗೆ ಮತದಾರರ ಗುರುತಿನ ಚೀಟಿ ಕಡ್ಡಾಯಗೊಳಸಲಾಗುತ್ತದೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿ ನಿಮ್ಮ ವೋಟರ್ ಐಡಿ ಡಿಲೀಟ್ ಆಗದಂತೆ ಎಚ್ಚರಿಕೆ ವಹಿಸಿ ಎಂದು ಕರೆ ನೀಡಿದ್ದರು.

PREV
Read more Articles on
click me!

Recommended Stories

ಕರ್ನಾಟಕ ಪೊಲೀಸರ ಲಂಚದ ಆಡಿಯೋ ವೈರಲ್ ಪ್ರಕರಣ; ಮೂವರು ಪಿಎಸ್‌ಐಗಳು ಅಮಾನತು!
ಕುದುರೆಮುಖದ ಬೆಟ್ಟಗಳಲ್ಲಿ ನೀಲಕುರಿಂಜಿಯ ನೀಲಿ ಲೋಕ..! ಪ್ರಕೃತಿ ಪ್ರವಾಸಿಗರ ವಿಶೇಷ ಗಮನ ಸೆಳೆಯುತ್ತಿರುವ ನೀಲಿ ಸುಂದರಿ