ಕಾಂಗ್ರೆಸಿಗರೆಂದು ಹೇಳಿಕೊಂಡು ದರ್ಪ : ಯುವಕನ ಮೇಲೆ ಮಾರಣಾಂತಿಕ ಹಲ್ಲೆ

By Kannadaprabha News  |  First Published Mar 6, 2020, 12:14 PM IST

ತಾವು ಕಾಂಗ್ರೆಸ್ ಕಾರ್ಯಕರ್ತರೆಂದು ಹೇಳಿಕೊಂಡು ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾನೆ. 


ಚಿಕ್ಕಮಗಳೂರು [ ಮಾ.06]: ಮರಗಳ್ಳತನದ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ ಎಂದು ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು ಜಿಲ್ಲೆ ಕೆಸವಿನ ಮನೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಆದರ್ಶ ಎಂಬ ಯುವಕನ ಮೇಲೆ ಮನಬಂದಂತೆ ಥಳಿಸಿ ಹಲ್ಲೆ ಮಾಡಲಾಗಿದೆ. 

Latest Videos

undefined

ಮರಗಳ್ಳರ ಹಲ್ಲೆಯಿಂದ ಆದರ್ಶ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ತಂಗಿ ಎನ್ನುತ್ತಿದ್ದಾತನೇ ರೇಪ್‌ಗೆ ಮುಂದಾದ, ವಿರೋಧಿಸಿದಾಗ ಕತ್ತು ಕೊಯ್ದ!...

ತಾವು ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಿಕೊಂಡು ರಾಜೇಶ್,  ರಮೇಶ್ ಎಂಬುವರಿಬ್ಬರು ಆದರ್ಶನ ಎಂಬ ಯುವಕನ ಮೇಲೆ ಹಲ್ಲೆ ಮಾಡಿ  ದರ್ಪ ಮೆರೆದಿದ್ದಾರೆ. 

ಸದ್ಯ ಈ ಸಂಬಂಧ ಚಿಕ್ಕಮಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. 

click me!