ಮದುವೆಯಾಗುವುದಾಗಿ ನಂಬಿಸಿದ.. ಆಕೆ ಮೇಲೆ ಲೈಂಗಿಕ ದೌರ್ಜನ್ಯವನ್ನೂ ಎಸಗಿದ ... ಆದ್ರೆ ಈಗ ಮಾತ್ರ ಎಲ್ಲಾ ಬಿಟ್ಟು ಕೈ ಕೊಟ್ಟು ದೂರ ಹೋದ
ಬೆಂಗಳೂರು (ಫೆ.03): ಮದುವೆಯಾಗುವುದಾಗಿ ನಂಬಿಸಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
2018 ರಲ್ಲಿ ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಸಹಪಾಠಿಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
2018 ರಲ್ಲಿ ನಗರದ ಖಾಸಗಿ ಕಾಲೇಜಿನಲ್ಲಿ ಇಬ್ಬರೂ ಒಟ್ಟಿಗೆ ವ್ಯಾಸಂಗ ಮಾಡುತ್ತಿದ್ದು, ಈ ವೇಳೆ ಪರಿಚಯವಾಗಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.
ಅಕ್ರಮ ಸಂಬಂಧ : ವಿವಸ್ತ್ರಗೊಳಿಸಿ ಫೋಟೊ ತೆಗೆದಿದ್ದಕ್ಕೆ ಯುವಕ ಸೂಸೈಡ್
ಮದುವೆಯಾಗುವುದಾಗಿ ಹೇಳಿ ಯುವತಿ ಜೊತೆ ಸಲುಗೆಯಿಂದ ಇದ್ದ ಆರೋಪಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನೂ ಎಸಗಿದ್ದಾನೆ.
ಇತ್ತೀಚೆಗೆ ಯುವತಿಯನ್ನು ಮದುವೆಯಾಗಲು ಯುವಕ ನಿರಾಕರಣೆ ಮಾಡಿದ್ದು, ಮದುವೆ ಹೆಸರಲ್ಲಿ 6 ಲಕ್ಷ ಹಣ ಪಡೆದು ವಂಚಿಸಿದ ಆರೋಪವನ್ನು ಆತನ ಮೇಲೆ ಮಾಡಲಾಗಿದೆ.
ಈ ಬಗ್ಗೆ ಯುವತಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.