ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕ ವೃತ್ತಿ ಮಾಡುತ್ತಿದ್ದ 30ರ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಊರ ಹೊರಗಿನ ಹುಣಸೆ ಮರದಲ್ಲಿ ಮೃತದೇಹ ಪತ್ತೆಯಾಗಿದೆ.
ಶಿಡ್ಲಘಟ್ಟ (ಮಾ.12): ತಾಲೂಕಿನ ಪಲಿಚರ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮನಹಳ್ಳಿ ಗ್ರಾಮದ ಹೊರವಲಯದ ರಸ್ತೆ ಪಕ್ಕದ ಜಮೀನು ಒಂದರಲ್ಲಿ ಇರುವ ಹುಣಸೆ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕಾಲೇಜ್ ಉಪನ್ಯಾಸಕ ಮುರುಳಿ ಶವ ಪತ್ತೆಯಾಗಿದೆ.
ಸೋಮನಹಳ್ಳಿ ಗ್ರಾಮದ ನಿವಾಸಿ ಮೃತ ಮುರುಳಿ (30) ಎಂದು ಗುರುತಿಸಲಾಗಿದೆ. ಯಲಂಕದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ 8 ವರ್ಷದಿಂದ ಕೆಲಸ ಮಾಡುತ್ತಿದ್ದರು. ದಿನನಿತ್ಯ ಕಾಲೇಜಿಗೆ ಊರಿಗೆ ಬಂದು ಹೋಗುತ್ತಿದ್ದರು.
ಮಂಡ್ಯ; ದೆವ್ವಕ್ಕೆ ಹೆದರಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದರು!
ಮುರಳಿ ನಿನ್ನೆ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.