ಬಾಗಲಕೋಟೆ: ಕೆರೂರನಲ್ಲಿ ಗಮನಸೆಳೆದ ವಿದ್ಯಾರ್ಥಿಗಳ ಭರ್ಜರಿ ಡ್ಯಾನ್ಸ್‌!

By Suvarna News  |  First Published Dec 16, 2019, 1:38 PM IST

ಯುವ ಸೌರಭ ಕಾರ್ಯಕ್ರಮದಲ್ಲಿ ಮನರಂಜಿಸಿದ ಜಾನಪದ ಹಾಡುಗಳ ಸೊಗಡು‌| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮ| ಕಾರ್ಯಕ್ರಮಲ್ಲಿ ಭಾಗವಹಿಸಿದ್ದ ಕಾಲೇಜು ವಿದ್ಯಾರ್ಥಿಗಳು|


ಬಾಗಲಕೋಟೆ(ಡಿ.16): ಕಾಲೇಜು ಹಂತದಲ್ಲಿನ ಯುವಕ ಯುವತಿಯರಿಗೆ ಹಾಡು ಮತ್ತು ನೃತ್ಯಕ್ಕೆ ಅವಕಾಶ ನೀಡುವ  ಮೂಲಕ ಅವರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. 

"

Tap to resize

Latest Videos

ಸೋಮವಾರ ನಗರದ ಎಮ್.ಎಚ್.ಮೆಣಸಗಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಾಗಲಕೋಟೆ ಹಾಗೂ ಬನಶ್ರೀ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಯುಸಿ ವಿದ್ಯಾರ್ಥಿಗಳು ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದ ಯುವ ಕಲಾವಿದರು ಸಹ ಭಾಗವಹಿಸಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇತ್ತ ಬಾಗಲಕೋಟೆಯ ಓಷಿಯನ್ ಡಾನ್ಸ್ ಅಕಾಡೆಮಿಯ ಯುವಕರು ಹಾಡಿಗೆ ಸ್ಟೆಪ್ ಹಾಕಿ ಸಖತ್ ಆಗಿ ಕುಣಿದು ಕುಪ್ಪಳಿಸುವ ಕಾರ್ಯಕ್ರಮದಲ್ಲಿ ಸೇರಿದ್ದ ಜನರಿಗೆ ಮನರಂಜನೆ ನೀಡಿದ್ದಾರೆ. ಇನ್ನು ಕಾಲೇಜು ವಿದ್ಯಾರ್ಥಿಗಳು ಭಾವಗೀತೆ, ಭಕ್ತಿಗೀತೆ, ಸುಗಮ ಸಂಗೀತ  ಜಾನಪದ ಗೀತೆ, ನಾಟಕ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. 

ಕಾರ್ಯಕ್ರಮದಲ್ಲಿ ವಿಶೇಷವಾಗಿ ಜಾನಪದ ಹಾಡುಗಳಿಗೆ ವಿಶಿಷ್ಟ ರೀತಿಯಿಂದ ನೃತ್ಯ ಮಾಡಿದ ಯುವಕ ಯುವತಿಯರು ನೆರೆದವರ ಅಭಿಮಾನಕ್ಕೆ ಸಾಕ್ಷಿಯಾಗಿದ್ದಾರೆ. ಇತ್ತ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಮೆಡಲ್ ಮತ್ತು ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. 
 

click me!