ಜಲಪಾತದಲ್ಲಿ ಜಾರಿ ಬಿದ್ದು ಯುವಕ ಸಾವು

Kannadaprabha News   | Asianet News
Published : Sep 18, 2020, 12:18 PM IST
ಜಲಪಾತದಲ್ಲಿ ಜಾರಿ ಬಿದ್ದು ಯುವಕ ಸಾವು

ಸಾರಾಂಶ

ಯುವಕನೋರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ನಡೆದಿದೆ.

ಸಕಲೇಶಪುರ (ಸೆ.18): ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಕಾಡುಮನೆ ಸಮೀಪ ಗುಡಾಣಕೆರೆ ಗ್ರಾಮದಲ್ಲಿ ಗುರುವಾರ ನಡೆದಿದೆ. ತಾಲೂಕಿನ ಮಾರನಹಳ್ಳಿ ಗ್ರಾಮದ ನಾಗೇಶ್‌ ಎಂಬುವರ ಪುತ್ರ ರತನ್‌ (26) ಮೃತಪಟ್ಟಿದ್ದಾನೆ. ಈತ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಬುಧವಾರ ರಾತ್ರಿಯಷ್ಟೇ ಬೆಂಗಳೂರಿನಿಂದ ಮಹಾಲಯ ಅಮಾವಾಸ್ಯೆ ಅಂಗವಾಗಿ ಊರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.

ಡ್ರಗ್ ಅಷ್ಟೇ ಅಲ್ಲ, ಹನಿಟ್ರಾಪ್‌ ಮಾಡಿ ಕೋಟಿ ಕೋಟಿ ಗಳಿಸುತ್ತಿದ್ನಾ ವಿರೇನ್ ಖನ್ನಾ? .

ಗುರುವಾರ ತನ್ನ ಕುಟುಂಬದ ಇತರ ನಾಲ್ಕು ಜನ ಸಂಬಂ​ಧಧಿಗಳ ಜೊತೆ ಗುಡಾಣಕೆರೆ ಸಮೀಪವಿರುವ ಅಬ್ಬಿಗುಂಡಿ ಜಲಪಾತಕ್ಕೆ ಮಧ್ಯಾಹ್ನದ ವೇಳೆಗೆ ಬಂದಿದ್ದು, ಈ ವೇಳೆ ಜೊತೆಯಲ್ಲಿದ್ದ ಒಬ್ಬರಿಗೆ ಮೊಬಬೈಲ್‌ ಕೊಟ್ಟು ಫೊಟೊ ತೆಗೆಸಿಕೊಳ್ಳುವಾಗ ಕಾಲು ಜಾರಿ ಮೇಲಿಂದ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 

ಮುಳುಗುತಜ್ಞರ ಸಹಾಯದಿಂದ ಮೃತದೇಹವನ್ನು ತೆಗೆಯಲಾಯಿತು. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಸ್‌ಐ ಚಂದ್ರಶೇಖರ್‌ ಸೇರಿದಂತೆ ಇತರರು ಭೇಟಿ ನೀಡಿದ್ದರು.

PREV
click me!

Recommended Stories

ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!