ಯುವನಿಧಿ ಕಾರ್ಯಕ್ರಮವೂ ಶೀಘ್ರ ಅನುಷ್ಠಾನ: ಸಚಿವ ಸಂತೋಷ್‌ ಲಾಡ್‌

By Kannadaprabha News  |  First Published Aug 7, 2023, 2:45 AM IST

ಸರ್ಕಾರದ ಐದು ಗ್ಯಾರಂಟಿಗಳ ಜಾರಿಗೆ ಅಂದಾಜು .60 ಸಾವಿರ ಕೋಟಿ ಆಗಲಿದೆ. ಸಹಜವಾಗಿ ಅನುದಾನದ ಕೊರತೆ ಉಂಟಾಗುತ್ತದೆ. ಇದನ್ನು ನಾನೂ ಒಪ್ಪುತ್ತೇನೆ. ಆದರೆ, ಇನ್ನು ಆರು ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗಳ ಸಾಕಾರಕ್ಕೆ ಕ್ರಮವಹಿಸಿದ್ದಾರೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ 


ಹೊಸಪೇಟೆ(ಆ.07):  ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಹಂತಹಂತವಾಗಿ ಜಾರಿ ಮಾಡುತ್ತಿದ್ದು, ಯುವನಿಧಿ ಕಾರ್ಯಕ್ರಮವನ್ನೂ ಸದ್ಯದಲ್ಲೇ ಜಾರಿ ಮಾಡಲಾಗುವುದು. ಸದ್ಯ ಗೃಹಲಕ್ಷ್ಮೀ ಯೋಜನೆಯ ಎಲ್ಲ ಫಲಾನುಭವಿಗಳಿಗೂ ಮಾಸಿಕ ತಲಾ 2000 ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಐದು ಗ್ಯಾರಂಟಿಗಳ ಜಾರಿಗೆ ಅಂದಾಜು .60 ಸಾವಿರ ಕೋಟಿ ಆಗಲಿದೆ. ಸಹಜವಾಗಿ ಅನುದಾನದ ಕೊರತೆ ಉಂಟಾಗುತ್ತದೆ. ಇದನ್ನು ನಾನೂ ಒಪ್ಪುತ್ತೇನೆ. ಆದರೆ, ಇನ್ನು ಆರು ತಿಂಗಳಲ್ಲಿ ಎಲ್ಲವೂ ಸರಿಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗಳ ಸಾಕಾರಕ್ಕೆ ಕ್ರಮವಹಿಸಿದ್ದಾರೆ ಎಂದು ಹೇಳಿದ್ದಾರೆ.

Latest Videos

undefined

ಕೈಕೊಟ್ಟ ಮಳೆ: ಬರ ಘೋಷಣೆಗೆ ಸರ್ಕಾರ ಚಿಂತನೆ, ಸಚಿವ ಲಾಡ್‌ 

ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ ಸಾಕಾರಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ ಶೇ.94ರಷ್ಟುಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ ಎಂದರು.

click me!