ಹಾಲಿ ಶಾಸಕ ಮಸಾಲಾ ಜಯರಾಮ್‌ರ ಸಾಧನೆ ಶೂನ್ಯವಾಗಿದೆ. ಕಳೆದ 5 ವರ್ಷಗಳ ಅವಧಿಯಲ್ಲಿ ಶಾಶ್ವತವಾದ ಯಾವುದೇ ಗುರುತರ ಕಾಮಗಾರಿ ಮಾಡಿಲ್ಲ. ಕೇವಲ ಕಮಿಷನ್ ಆಸೆಗಾಗಿ ಸಿಸಿ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಿರುವುದನ್ನು ಬಿಟ್ಟರೆ ಇನ್ನು ಹೇಳಿಸಿಕೊಳ್ಳುವಂತಹ ಯಾವುದೇ ಕಾಮಗಾರಿ ಆಗಿಲ್ಲ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ತುರುವೇಕೆರೆ : ಹಾಲಿ ಶಾಸಕ ಮಸಾಲಾ ಜಯರಾಮ್‌ರ ಸಾಧನೆ ಶೂನ್ಯವಾಗಿದೆ. ಕಳೆದ 5 ವರ್ಷಗಳ ಅವಧಿಯಲ್ಲಿ ಶಾಶ್ವತವಾದ ಯಾವುದೇ ಗುರುತರ ಕಾಮಗಾರಿ ಮಾಡಿಲ್ಲ. ಕೇವಲ ಕಮಿಷನ್ ಆಸೆಗಾಗಿ ಸಿಸಿ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಿರುವುದನ್ನು ಬಿಟ್ಟರೆ ಇನ್ನು ಹೇಳಿಸಿಕೊಳ್ಳುವಂತಹ ಯಾವುದೇ ಕಾಮಗಾರಿ ಆಗಿಲ್ಲ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ತಾಲೂಕಿನ ಗುರುವಿನಮಠದ ಶ್ರೀ ಪತ್ರೆ ಆಂಜನೇಯಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಸಾಲಾ ಜಯರಾಮ್ ತಮ್ಮೊಂದಿಗೆ ಬಹಿರಂಗ ಚರ್ಚೆಗೆ ಬಂದರೆ ಸವಾಲು ಸ್ವೀಕರಿಸಿ ತಾವು ಶಾಸಕರಾಗಿದ್ದಾಗ ಸರ್ಕಾರದಿಂದ ತಂದಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವಿವರವನ್ನು ದಾಖಲೆ ಸಹಿತ ನೀಡುವೆ. ತಾವು ನೀಡಿರುವ ಸವಾಲನ್ನು ಸ್ವೀಕರಿಸಿದರೆ ತಾವು ಮಾಡಿರುವ ಸಾಧನೆಗಳ ಬಗ್ಗೆ ಬೆಳಕು ಚೆಲ್ಲಲು ಸಾಧ್ಯವಾಗಲಿದೆ ಎಂದು ಎಂ.ಟಿ.ಕೃಷ್ಣಪ್ಪ ಹೇಳಿದರು.
undefined
ರಾಜ್ಯ ಯುವ ಜೆಡಿಎಸ್‌ನ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ಕಾರ್ಯಕ್ರಮಕ್ಕೆ ಆಗಮಿಸುವರು ಎಂದು ಹೇಳಲಾಗಿತ್ತು. ಆದರೆ ಸಾಯಂಕಾಲ 5 ಗಂಟೆಯ ವೇಳೆಗೆ ನಿಖಿಲ್ ಕುಮಾರಸ್ವಾಮಿಯವರ ಕಾರ್ಯಕ್ರಮ ಕೊನೇ ಕ್ಷಣದಲ್ಲಿ ರದ್ದಾಗಿದೆ ಎಂಬ ಸಂಗತಿ ತಿಳಿದು ಜೆಡಿಎಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಬೇಸರ ತರಿಸಿತು.
ಪತ್ರೆ ಆಂಜನೇಯಸ್ವಾಮಿ ದೇವಾಲದಲ್ಲಿ ನೂತನವಾಗಿ ನಿರ್ಮಾಣ ಮಾಡಲಿರುವ ಆಂಜನೇಯ ಸ್ವಾಮಿಯವರ ವಿಗ್ರಹ ನಿರ್ಮಾಣಕ್ಕೆ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರು 5 ಲಕ್ಷ ರು. ಗಳ ದೇಣಿಗೆಯನ್ನು ನೀಡಿದರು.
ಈ ಸಮಾರಂಭದಲ್ಲಿ ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟಚಂದ್ರೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಸ್ವಾಮಿ, ಯುವ ಜೆಡಿಎಸ್ ಅಧ್ಯಕ್ಷ ಬಾಣಸಂದ್ರ ರಮೇಶ್, ಮುಖಂಡರಾದ ಬಿ.ಎಸ್.ದೇವರಾಜ್, ಹೆಡಿಗೇಹಳ್ಳಿ ವಿಶ್ವನಾಥ್, ಲೀಲಾವತಿ ಗಿಡ್ಡಯ್ಯ, ಮಂಜುಳಾ ಶಿವರಾಜ್, ಮಧು, ಪ್ರಸನ್ನಕುಮಾರ್, ವಿಜಯೇಂದ್ರ, ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸಿಎಸ್ ಪುರ ಕುಮಾರ್, ಎ.ಬಿ.ಜಗದೀಶ್, ತಾವರೇಕೆರೆ ತಿಮ್ಮೇಗೌಡ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
ತುರುವೇಕೆರೆ : ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗಿದೆ. ಪಟ್ಟಣದಲ್ಲಿ ಕಳಪೆ ಗುಣಮಟ್ಟದಲ್ಲಿ ನಿರ್ಮಾಣಗೊಂಡಿರುವ ಒಳ ಚರಂಡಿಯನ್ನು ಸಂಪೂರ್ಣವಾಗಿ ದುರಸ್ಥಿಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಬಳಸುವ ಸಲುವಾಗಿ ಸರ್ಕಾರದಿಂದ ಸುಮಾರು 10 ಕೋಟಿ ಬಿಡುಗಡೆಯಾಗಿದೆ ಎಂದು ಶಾಸಕ ಮಸಾಲಾ ಜಯರಾಮ್ ಹೇಳಿದರು.
ಪಟ್ಟಣದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಸುಮಾರು 8 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ಮುಕ್ತಿ ನೀಡಲಾಗಿದೆ. 2007ರಲ್ಲಿ ಭೂಮಿ ಪೂಜೆ ಮಾಡಿ ಕಾಮಗಾರಿ ಸಂಪೂರ್ಣಗೊಳಿಸದೇ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಮುಚ್ಚಲಾಗಿತ್ತು. ತಾವು ಶಾಸಕರಾದ ನಂತರ ಅರ್ಧಕ್ಕೆ ನಿಂತಿದ್ದ ಕಟ್ಟಡಕ್ಕೆ ಅನುದಾನವನ್ನು ನೀಡಿ ಪಟ್ಟಣ ಪಂಚಾಯಿತಿ ಸದಸ್ಯರ ಸಹಕಾರದಿಂದ ಸುಮಾರು 8 ಕೋಟಿ ವೆಚ್ಚದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಿಸಿರುವುದಾಗಿ ಹೇಳಿದರು.
ಮೊದಲನೆ ನೆಲ ಮಹಡಿಯಲ್ಲಿ ಸುಸಜ್ಜಿತವಾದ ಸುಮಾರು 45 ಕ್ಕೂ ಹೆಚ್ಚು ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ಮೊದಲನೆಯ ಮಹಡಿಯಲ್ಲಿ ವಿಶಾಲವಾದ ಹಾಲ್ ನಿರ್ಮಿಸಲಾಗಿದೆ. ಇದರಿಂದ ಪಟ್ಟಣ ಪಂಚಾಯಿತಿಗೆ ಪ್ರತಿ ವರ್ಷ ಸುಮಾರು 50 ರಿಂದ 60 ಲಕ್ಷ ಆದಾಯ ಬರಲಿದೆ. ಈ ಆದಾಯವನ್ನು ಬಳಸಿ ಪಟ್ಟಣದ ಹೆಚ್ಚಿನ ಅಭಿವೃದ್ಧಿ ಮಾಡಬಹುದು. ನಗರೋತ್ಪನ್ನ ಯೋಜನೆಯಡಿಯಲ್ಲಿ ಈಗಾಗಲೇ 5 ಕೋಟಿ ಹಣ ಬಿಡುಗಡೆಯಾಗಿದೆ. ಎಲ್ಲ ವಾರ್ಡ್‌ಗಳಲ್ಲಿಯೂ ಕಾಂಕ್ರೀಟ್ ರಸ್ತೆ, ಚರಂಡಿ, ನಿರ್ಮಿಸಲಾಗುತ್ತಿದೆ. ವಾಣಿಜ್ಯ ಸಂರ್ಕೀರ್ಣ ಸುತ್ತಮುತ್ತಲಿನ ಬೀದಿ ಬದಿ ವ್ಯಾಪಾರಿಗಳಿಗೆ ಸಂತೆ ಮೈದಾನದಲ್ಲಿ ಸುಸಜ್ಜಿತವಾದ ಮಾರುಕಟ್ಟೆಸ್ಥಾಪನೆ ಮಾಡಲಾಗುತ್ತಿದೆ. ಅಲ್ಲಿ ಕುಡಿಯುವ ನೀರು, ನೆರಳು, ಶೌಚಾಲಯ ಸೇರಿದಂತೆ ಸುಸಜ್ಜಿತವಾದ ಕಾಂಕ್ರೀಟ್ ಪಾತ್ ನಿರ್ಮಿಸಿ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಸೂಕ್ತವಾದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.