ಬೆಳಗಾವಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ರಾಜೀನಾಮೆಗೆ ಆಗ್ರಹ

Published : Jun 19, 2019, 09:43 AM ISTUpdated : Jun 19, 2019, 09:46 AM IST
ಬೆಳಗಾವಿ  ಜಿಲ್ಲಾ ಪಂಚಾಯತ್ ಅಧ್ಯಕ್ಷೆ ರಾಜೀನಾಮೆಗೆ ಆಗ್ರಹ

ಸಾರಾಂಶ

ಬೆಳಗಾವಿ ಜಿಲ್ಲಾಧ್ಯಕ್ಷೆ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ನಿಟ್ಟಿನಲ್ಲಿ ಅವರು ರಾಜೀನಾಮೆ ನೀಡುವಂತೆ ಸದಸ್ಯರು ಆಗ್ರಹಿಸುತ್ತಿದ್ದಾರೆ. 

ಬೆಳಗಾವಿ [ಜೂ.19] : ಜಿ.ಪಂ. ಅಧ್ಯಕ್ಷೆ ಆಶಾ ಐಹೊಳೆ ಅವರು ಬಂಧನದ ಭೀತಿಯಿಂದಲೇ ಮಂಗಳವಾರ ನಡೆದ ಜಿ.ಪಂ. ಸಾಮಾನ್ಯ ಸಭೆಗೆ ಗೈರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಶಾ ಗೈರಾದ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದ್ದು, ಕೆಲ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. 

ಅಥಣಿ ಪೊಲೀಸ್ ಠಾಣೆಯಲ್ಲಿ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮತ್ತು ಅವರ ಪತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದಕ್ಕೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಂದಿನಿಂದ ಆಶಾ ಯಾವ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿಲ್ಲ. 

ಅದೇ ರೀತಿ ಮಂಗಳವಾರ ಜಿಪಂ ಸಭಾಭವನದಲ್ಲಿ ನಡೆದ ಜಿಪಂ ಸಾಮಾನ್ಯಸಭೆಗೂ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಪಂ  ಉಪಾಧ್ಯಕ್ಷ ಅರುಣ ಕಟಾಂಬಳೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

PREV
click me!

Recommended Stories

HD Kumaraswamy Birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ Congress-BJP ನಡುವೆ ಗದ್ದಲ