ಮನೆ ಹಸ್ತಾಂತರ ಕಾರ್ಯಕ್ರಮಕ್ಕೆ ಕುಮಾರಸ್ವಾಮಿಗಿಲ್ಲ ಆಹ್ವಾನ

By Kannadaprabha News  |  First Published Oct 27, 2019, 8:51 AM IST

ಕೊಡಗಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಮನೆ ಹಸ್ತಾಂತರ ಸಂದರ್ಭ ಮಾಜಿ ಸಿಎಂ ಹೆಚ್‌. ಡಿ. ಕುಮಾರಸ್ವಾಮಿ ಅವರು ಇರಲಿಲ್ಲ. ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಅವರಿಗೆ ಆಹ್ವಾನವೇ ಕೊಟ್ಟಿರಲಿಲ್ಲ ಎನ್ನುವುದು ತಿಳಿದುಬಂದಿದೆ. ಈ ಬಗ್ಗೆ ಜೆಡಿಎಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮಡಿಕೇರಿ(ಅ.27): ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಮಹಾಮಳೆ ಹಾನಿಯ ಸಂದರ್ಭ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸಕಾಲದಲ್ಲಿ ಸ್ಪಂದಿಸಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಮನೆಗಳ ಹಸ್ತಾಂತರದ ಸಂದರ್ಭ ಇಂದಿನ ಬಿಜೆಪಿ ಸರ್ಕಾರ ಕುಮಾರಸ್ವಾಮಿ ಅವರನ್ನು ಕಡೆಗಣಿಸಿದೆ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್‌ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶುಕ್ರವಾರ ಸಂತ್ರಸ್ತರಿಗಾಗಿ ಮೊದಲ ಹಂತದಲ್ಲಿ 35 ಮನೆಗಳನ್ನು ಹಸ್ತಾಂತರಿಸಲಾಗಿದೆ. ಆದರೆ ಈ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್‌ ಅವರನ್ನು ಆಹ್ವಾನಿಸದೇ ಇರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tap to resize

Latest Videos

ಮಡಿಕೇರಿ: ಹುಲಿ ಹೆಜ್ಜೆ ಗುರುತು ಪತ್ತೆ

ಕೊಡಗು ಜಿಲ್ಲೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿದಾಗ ಜನರಲ್ಲಿ ಆತ್ಮಸ್ಥೆ ೖರ್ಯ ತುಂಬಿದವರು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಾ.ರಾ. ಮಹೇಶ್‌. ಇಂದು ಜಿಲ್ಲೆಯ ವಿವಿಧೆಡೆ ನೊಂದ ಸಂತ್ರಸ್ತರಿಗಾಗಿ ಎಂಟುನೂರಕ್ಕೂ ಹೆಚ್ಚು ಸುಸಜ್ಜಿತ ಮತ್ತು ಗುಣಮಟ್ಟದ ಮನೆಗಳು ನಿರ್ಮಾಣಗೊಳ್ಳುತ್ತಿವೆ ಎಂದರೆ ಅದಕ್ಕೆ ಪ್ರಮುಖ ಕಾರಣ ಇವರಿಬ್ಬರು. ಆದರೆ ಮನೆಗಳ ಹಸ್ತಾಂತರದ ಸಂದರ್ಭ ಸೌಜನ್ಯಕ್ಕಾದರೂ ಕುಮಾರಸ್ವಾಮಿ ಮತ್ತು ಸಾ.ರಾ. ಮಹೇಶ್‌ ಅವರನ್ನು ಆಹ್ವಾನಿಸಿಲ್ಲ ಎಂದು ಗಣೇಶ್‌ ಆರೋಪಿಸಿದ್ದಾರೆ.

ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿ ನದಿ ನೀರಿನ ಮಟ್ಟಏರಿಕೆ...

click me!