ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಗಡಿ ಭಾಗದ ಕೊಪ್ಪ ಅರಣ್ಯ ತಪಾಸಣೆ ಗೇಟ್ ಬಳಿ ನದಿಯಲ್ಲಿ 4 ಮೀಟರ್ ಎತ್ತರಕ್ಕೆ ನೀರು ಹರಿಯುತ್ತಿರುವ ದೃಶ್ಯ ಗೋಚರಿಸಿದೆ.
ಮಡಿಕೇರಿ(ಅ.27): ಕರಾವಳಿ ಸೇರಿದಂತೆ ಕೊಡಗಿನ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಸೈಕ್ಲೋನ್ ಕ್ಯಾರ್ ಪರಿಣಾಮ ಕೊಡಗಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು ಕುಶಾಲನಗರ ಪ್ರದೇಶದಲ್ಲಿ ಕಾವೇರಿ ನೀಡಿನ ಹರಿವು ಏರಿಕೆಯಾಗಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಗಡಿ ಭಾಗದ ಕೊಪ್ಪ ಅರಣ್ಯ ತಪಾಸಣೆ ಗೇಟ್ ಬಳಿ ನದಿಯಲ್ಲಿ 4 ಮೀಟರ್ ಎತ್ತರಕ್ಕೆ ನೀರು ಹರಿಯುತ್ತಿರುವ ದೃಶ್ಯ ಗೋಚರಿಸಿದೆ.
ಹಾರಂಗಿ ಜಲಾಶಯ ಭರ್ತಿಯಾಗಿದ್ದು ಹೆಚ್ಚುವರಿ ನೀರನ್ನು ಜಲಾಶಯದ ಕ್ರಸ್ಟ್ ಗೇಟ್ ಮತ್ತು ಕಾಲುವೆ ಮೂಲಕ ಹರಿಸಲಾಗುತ್ತಿದೆ. ಕುಶಾಲನಗರ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆ ಜಿನುಗುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಬಹುತೇಕ ಅಸ್ತವ್ಯಸ್ತಗೊಂಡಿದೆ. ವ್ಯಾಪಾರ ವಹಿವಾಟಿನಲ್ಲಿ ಕೂಡ ಏರುಪೇರು ಕಂಡುಬಂದಿದ್ದು ವ್ಯಾಪಾರಿಗಳು ಗ್ರಾಹಕರಿಲ್ಲದ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.