ಮಡಿಕೇರಿ: 17,18ರಂದು ಏಕಮುಖ ಸಂಚಾರ

Published : Oct 16, 2019, 08:59 AM IST
ಮಡಿಕೇರಿ: 17,18ರಂದು ಏಕಮುಖ ಸಂಚಾರ

ಸಾರಾಂಶ

ತುಲಾ ಸಂಕ್ರಮಣ ಆಚರಣೆ ಪ್ರಯುಕ್ತ ನಗರದಲ್ಲಿ ಏಕಮುಖ ವಾಹನ ಸಂಚಾರ  ವ್ಯವಸ್ಥೆ ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಆದೇಶ ಹೊರಡಿಸಿದ್ದಾರೆ.  

ಮಡಿಕೇರಿ(ಅ.16): ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಅ. 17 ಮತ್ತು 18 ರಂದು ನಡೆಯಲಿರುವ ತುಲಾ ಸಂಕ್ರಮಣ ಜಾತ್ರೆ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲು ಏಕಮುಖ ಸಂಚಾರಕ್ಕೆ ನಿರ್ಧರಿಸಲಾಗಿದೆ.

ಈ ನಿಟ್ಟಿನಲ್ಲಿ ಅ. 17 ರಂದು ಮಧ್ಯಾಹ್ನ 2 ಗಂಟೆಯಿಂದ 18ರಂದು ಸಂಜೆ 5 ಗಂಟೆಯವರೆಗೆ ಏಕಮುಖ ಸಂಚಾರ ವ್ಯವಸ್ಥೆ ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಆದೇಶ ಹೊರಡಿಸಿದ್ದಾರೆ.

ಅನೈತಿಕ ಸಂಬಂಧ ಮುಚ್ಚಿಡಲು ಅಮಾಯಕ ತಮ್ಮನನ್ನೇ ಕೊಂದ ಅಣ್ಣಂದಿರು..!

ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5) ರಲ್ಲಿ ದತ್ತವಾದ ಅಧಿಕಾರದಂತೆ ಆದೇಶ ಹೊರಡಿಸಲಾಗಿದೆ.

ಏಕಮುಖ ಸಂಚಾರ ವ್ಯವಸ್ಥೆ ಇಂತಿದೆ: ಮಡಿಕೇರಿ ಹಾಗೂ ಮಂಗಳೂರು ಕಡೆಯಿಂದ ಭಾಗಮಂಡಲಕ್ಕೆ ಹೋಗುವ ಎಲ್ಲ ವಾಹನಗಳು ತಾಳತ್‌ಮನೆ-ಉಡೋತ್‌ಮೊಟ್ಟೆ-ಅಪ್ಪಂಗಳ ಮಾರ್ಗವಾಗಿ ಭಾಗಮಂಡಲಕ್ಕೆ ಸಂಚರಿಸುವುದು. ಭಾಗಮಂಡಲದಿಂದ ಮಡಿಕೇರಿ ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಅಪ್ಪಂಗಳ- ಪನ್ಯ-ಕಾಟಕೇರಿ ಮಾರ್ಗವಾಗಿ ಸಂಚರಿಸುವುದು.

ಸರ್ಕಾರಿ ಅಂಗನವಾಡಿಗೆ ಕೊಡಗು SP ಮಗಳು : ಮಾದರಿಯಾದ್ರು ಅಧಿಕಾರಿ

ಈ ಬಗ್ಗೆ ಮೋಟಾರ್‌ ವಾಹನ ಕಾಯ್ದೆ 1988 ರ ಸೆಕ್ಷನ್‌ 116 ಹಾಗೂ ಕರ್ನಾಟಕ ಮೋಟಾರ್‌ ವಾಹನ ನಿಯಮ 1989ರ (ತಿದ್ದುಪಡಿ ನಿಯಮ 1990) ನಿಯಮ 221ಎ(2)ರಂತೆ ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಅಧಿಕಾರ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಮೂರು ದಿನ ಮದ್ಯ ಸಿಗಲ್ಲ..!

PREV
click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಬಾರ್ ಆಗಿ ಮಾರ್ಪಟ್ಟ KSRTC ಬಸ್: ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!