ರಾಜ್ಯ ಚುನಾವಣಾ ಆಯೋಗ ದ.ಕ. ಜಿಲ್ಲೆಯಲ್ಲಿ ನ.12ರಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಿಗದಿಪಡಿಸಿರುತ್ತದೆ. ಕಾರ್ಮಿಕರಿಗೆ ನ.12ರಂದು ಒಂದು ದಿನದ ವೇತನ ಸಹಿತ ರಜೆಯನ್ನು ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಅನುವು ಮಾಡಿಕೊಡಲು ಸೂಚಿಸಲಾಗಿದೆ.
ಮಂಗಳೂರು(ನ.09): ರಾಜ್ಯ ಚುನಾವಣಾ ಆಯೋಗ ದ.ಕ. ಜಿಲ್ಲೆಯಲ್ಲಿ ನ.12ರಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಿಗದಿಪಡಿಸಿರುತ್ತದೆ. ಕಾರ್ಮಿಕರಿಗೆ ನ.12ರಂದು ಒಂದು ದಿನದ ವೇತನ ಸಹಿತ ರಜೆಯನ್ನು ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಅನುವು ಮಾಡಿಕೊಡಲು ಸೂಚಿಸಲಾಗಿದೆ.
ದಿನದಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೊಂದಾಯಿತರಾದ ಎಲ್ಲ ಕಾರ್ಮಿಕರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳು ಅನುವು ಮಾಡಿಕೊಡಬೇಕಾಗುತ್ತದೆ.
ಸಲಹೆಯೊಂದಿಗೆ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ: ಈಶ್ವರಪ್ಪ
ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳ ಮಾಲೀಕರು ತಮ್ಮ ಕಾರ್ಮಿಕರಿಗೆ ನ.12ರಂದು ಒಂದು ದಿನದ ವೇತನ ಸಹಿತ ರಜೆಯನ್ನು ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಅನುವು ಮಾಡಿಕೊಡಲು ಸೂಚಿಸಲಾಗಿದ್ದು ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟಸಂಸ್ಧೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ನಡೆಸಲಾಗುವುದು ಎಂದು ದ.ಕ. ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕನ್ನಡ ಕಟ್ಟಿದವರು: ಯಕ್ಷ ರಂಗದ ಜನಪ್ರಿಯ ತಾರೆ ಪಟ್ಲ ಸತೀಶ್ ಶೆಟ್ಟಿ!