ರಾಮ ಜನ್ಮ ಭೂಮಿ ಹಾಗೂ ಬಾಬರಿ ಮಸೀದಿ ವಿವಾದದ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಎಲ್ಲಾ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
ಕೊಡಗು(ನ.09): ರಾಮ ಜನ್ಮ ಭೂಮಿ ಹಾಗೂ ಬಾಬರಿ ಮಸೀದಿ ವಿವಾದದ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪು ಪ್ರಕಟವಾಗಲಿರುವುದರಿಂದ, 09.11.2019 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ, ಕೊಡಗು ಜಿಲ್ಲೆಯಾದ್ಯಂತ ಕಲಂ 144 ಸಿ. ಆರ್. ಪಿ.ಸಿ ನ್ನು ಜಾರಿಗೊಳಿಸಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ನೀಡಿದ್ದಾರೆ.
ಬರಲಿದೆ ಅಯೋಧ್ಯೆ ಆದೇಶ: ಸ್ವಪಕ್ಷೀಯರಿಗೆ ಮೋದಿ ಕೊಟ್ಟ ಸಂದೇಶ?
ಅದೇಶದ ಅನ್ವಯ 5 ಕ್ಕಿಂತ ಹೆಚ್ಚು ಮಂದಿ ಗುಂಪು ಸೀರುವಂತಿಲ್ಲ ಹಾಗೂ ಸಭೆ ಸಮಾರಂಭಗಳಿಗೆ ಹಾಗೂ ಮೆರವಣಿಗೆಗೆ ಅವಕಾಶವಿರುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜುಗಿಸಲಾಗುವುದು ಎಂದು ಕೊಡಗು ಜಿಲ್ಲೆ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಮದ್ಯ ಮಾರಾಟವಿಲ್ಲ:
09-11-2019 ರಂದು ಅಯೋಧ್ಯೆ ತೀರ್ಪು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಎಲ್ಲಾ ಮದ್ಯ ಮಾರಾಟ ಅಂಗಡಿಗಳಲ್ಲಿ, ಬಾರ್ & ರೆಸ್ಟೋರೆಂಟ್‌ಗಳಲ್ಲಿ ಮತ್ತು ಹೊಟೇಲ್ ಇತ್ಯಾದಿಗಳಲ್ಲಿ 09-11-2019 ರಂದು ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಾಮ ಜನ್ಮಭೂಮಿಯಲ್ಲಿ ಭಾರಿ ಕಟ್ಟೆಚ್ಚರ; ಸಂಭ್ರಮಾಚರಣೆ ನಿಷೇಧ