ವಿಮಾ ಕಂಪನಿಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಬೆಳೆ ವಿಮಾ ಹಣ ನೀಡುವಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಮಾವು ಬೆಳಗಾಗರರಿಂದ ಹಮ್ಮಿಕೊಳ್ಳಲಾಗಿದ್ದ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಪಟ್ಟಣ ಬಂದ್ ಬಹುತೇಕ ಯಶಸ್ವಿಯಾಗಿದೆ.
ವರದಿ : ದೀಪಕ್,ಏಷಿಯಾನೆಟ್ ಸುವರ್ಣ ನ್ಯೂಸ್
ಕೋಲಾರ (ಡಿ.8): ವಿಮಾ ಕಂಪನಿಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಬೆಳೆ ವಿಮಾ ಹಣ ನೀಡುವಲ್ಲಿ ಅನ್ಯಾಯವಾಗುತ್ತಿದೆ ಎಂದು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಪಟ್ಟಣ ಬಂದ್ ಕರೆ ನೀಡಲಾಗಿದೆ. ಬೆಳಗ್ಗೆಯಿಂದಲೇ ಶ್ರೀನಿವಾಸಪುರದಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡುವ ಮೂಲಕ ಪಟ್ಟಣ ಬಂದ್‌ಗೆ ಸಹಕರಿಸುವಂತೆ ಸಾರ್ವಜನಿಕರನ್ನು ಒತ್ತಾಯಿಸಿ ವಿವಿಧ ಸಂಘಟನೆಯವರು ಮನವಿ ಮಾಡಿರುವ ಹಿನ್ನೆಲೆ ಬಂದ್ ಬಹುತೇಕ ಯಶಸ್ವಿಯಾಗಿದೆ.
ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ವತಿಯಿಂದ ಪಟ್ಟಣ ಬಂದ್‌ಗೆ ಕರೆ ನೀಡಿದ್ದು,ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಸಧ್ಯ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶ್ರೀನಿವಾಸಪುರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಹ ಬಂದ್ ಮಾಡಲಾಗಿದೆ.ಇದರ ನಡುವೆ ದೂರದ ಊರಿಗೆ ಹೋಗುವ ಪ್ರಯಾಣಿಕರಿಗೆ ಹಾಗೂ ಶಾಲಾ ವಾಹನ ಸಂಚಾರವಿಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಶ್ರೀನಿವಾಸಪುರ ಪಟ್ಟಣದಲ್ಲಿರುವ ಖಾಸಗಿ ಹಾಗೂ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಸಹ ನೀಡಲಾಗಿದೆ.
ಟನ್ ಕಬ್ಬಿಗೆ ₹50 ಹೆಚ್ಚುವರಿ ದರ ಪಾವತಿಗೆ ಆದೇಶ
ಫಸಲ್ ಬಿಮಾ ಯೋಜನೆಯಡಿ ಖಾಸಗಿ ಕಂಪನಿಗಳಿಗೆ ವಿಮೆ ಹಣ ಕಟ್ಟಿರುವ ರೈತರಿಗೆ ಸರಿಯಾಗಿ ಪರಿಹಾರ ಸಿಗುತ್ತಿಲ್ಲ. ಕೇಂದ್ರ ಸರ್ಕಾರದ ಫಸಲ್ ಬಿಮಾ ಯೋಜನೆ ಕೆಲ ಖಾಸಗಿ ವಿಮಾ ಕಂಪನಿಗಳ ಹಿಡಿತದಲ್ಲಿದೆ. ಇನ್ಶುರೆನ್ಸ್ ಕಟ್ಟಿದ ರೈತರಿಗೆ ಜೀರೋ ಪರ್ಸೆಂಟ್ (೦%) ಎಂದು ತೋರಿಸಿ ಅನ್ಯಾಯ ಮಾಡಲಾಗ್ತಿದೆ ಅನ್ನೋದು ಹೋರಾಟಗಾರರ ಆರೋಪವಾಗಿದೆ. ಸರ್ಕಾರಗಳೇ ನೇರವಾಗಿ ವಿಮೆ ಕಟ್ಟಿಸಿಕೊಂಡು ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸುಮಾರು 6 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ವಿಮೆ ಕಟ್ಟಲಾಗಿದೆ. ಇದರಲ್ಲಿ ಶೇ.25 ರಷ್ಟು ಎಕರೆಯಷ್ಟು ಬೆಳೆ ನಷ್ಟದ ವಿಮೆ ಬಂದಿಲ್ಲ ಎಂಬುದು ಮಾವು ಬೆಳೆಗಾರರ ಒತ್ತಾಯವಾಗಿದೆ.