ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಮಸೀದಿಗೆ ಭೇಟಿ

By Suvarna News  |  First Published Mar 21, 2022, 2:10 PM IST

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಗವಿಸಿದ್ದೇಶ್ವರ ಸ್ಚಾಮೀಜಿ ಹಿರೇವಂಕಲಕುಂಟಾ ಗ್ರಾಮದ ಜುಮ್ಮಾ ಮಸೀದಿಗೆ ಭೇಟಿ‌  ನೀಡಿ ಸೌಹಾರ್ದತೆ ಮೆರೆದಿದ್ದಾರೆ.
 


ದೊಡ್ಡೇಶ್ ಯಲಿಗಾರ್ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಪ್ಪಳ (ಮಾ.21): ಕೊಪ್ಪಳದ (Koppal) ಗವಿಮಠದ ಪೀಠಾಧಿಪತಿಗಳಾದ ಗವಿಸಿದ್ದೇಶ್ವರ ಸ್ವಾಮೀಜಿ (Gavisiddeshwara Swamiji) ಯಾವಾಗಲೂ ಇತರ ಸ್ವಾಮೀಜಿಯವರಿಗಿಂತ ಭಿನ್ನವಾಗಿಯೇ ಕೆಲಸ ಮಾಡುತ್ತಾರೆ. ಈಗ ಅಂತದೇ ಕೆಲಸವೊಂದನ್ನು ಮಾಡಿದ್ದಾರೆ. ಇದು ಒಂದು ರೀತಿಯಲ್ಲಿ ಇಡೀ ಸಮಾಜಕ್ಕೆ ಮಾದರಿಯಾಗುವಂತಹ ಹಾಗೂ ಸಮಾಜದಲ್ಲಿ ಭಾವೈಕ್ಯತೆ ಸಾರುವಂತಹ ಕೆಲಸ.  ಈ ಬಾರಿ ಅವರು ಮಸೀದಿಗೆ (Mosque) ಭೇಟಿ ನೀಡುವ ಮೂಲಕ‌ ತಾವು ಇತರರಿಗಿಂತ ಭಿನ್ನ ಎಂದು ತೋರಿಸಿಕೊಟ್ಟಿದ್ದಾರೆ.

Tap to resize

Latest Videos

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ (Hirevankalakunta) ಗ್ರಾಮದಲ್ಲಿ ಗವಿಸಿದ್ದೇಶ್ವರ ಸ್ಚಾಮೀಜಿಗಳ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ. ಪ್ರತಿದಿನ ಸಂಜೆ ಪ್ರವಚನ ಕಾರ್ಯಕ್ರಮ ಜರಗುತ್ತಿದೆ.‌ ಇದರ ಮದ್ಯೆ ಪ್ರತಿದಿನ ಒಂದೊಂದು ಹಳ್ಳಿಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ ಪಾದಯಾತ್ರೆ ಮಾಡುತ್ತಾರೆ. ಈ 
 ಗವಿಸಿದ್ದೇಶ್ವರ ಸ್ವಾಮೀಜಿ ಹಿರೇವಂಕಲಕುಂಟಾ ಗ್ರಾಮದ ಜುಮ್ಮಾ ಮಸೀದಿಗೆ (jumma masjid) ಭೇಟಿ‌  ನೀಡಿ ಸೌಹಾರ್ದತೆ ಮೆರೆದಿದ್ದಾರೆ.

ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಹೇಳಿಕೆ ಯಾರೂ ನೀಡಬಾರದು: ಆರಗ ಜ್ಞಾನೇಂದ್ರ

ಗವಿಸಿದ್ದೇಶ್ವರ ಸ್ವಾಮೀಜಿ ಮಾತುಗಳೆಂದರೆ ಸಾಕು ಅವುಗಳಿಗೊಂದು ತೂಕ ಹೆಚ್ಚು.‌ಅವರು ಮಾತನಾಡುವ ಪ್ರತಿಯೊಂದು ಮಾತುಗಳು ಸಹ ಎಂತವರನ್ನು ಒಂದು ಕ್ಷಣ ಮಂತ್ರಮುಗ್ಧಗೊಳಿಸುತ್ತವೆ. ಮಸೀದಿಗೆ ಭೇಟಿ ನೀಡಿದ್ದ ವೇಳೆಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಮುಸ್ಲಿಂದ ಸಮುದಾಯದವರು ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಗವಿಸಿದ್ದೇಶ್ವರ ಸ್ವಾಮೀಜಿಗಳು ಭೂಮಿಯ ಮೇಲೆ ಬದುಕಿರುವ ಜೀವರಾಶಿಗಳಲ್ಲಿ ಮಾನವೀಯತೆ ಅತ್ಯಂತ ಶ್ರೇಷ್ಠವಾದದ್ದು, ಮನುಷ್ಯನಲ್ಲಿ ಭೇಧ- ಭಾವ ಇರಬಾರದು. ಸದಾ ಒಳ್ಳೇಯ ಕಾರ್ಯಗಳಲ್ಲಿ ತೊಡಗಬೇಕೆಂದರು.

NCEE SURVEY: ಲಾಕ್‌ಡೌನ್‌ ನಂತರ ಮೂಲಭೂತ ಕೌಶಲ್ಯ ಕಳೆದುಕೊಂಡ ಮಕ್ಕಳು!

ಜೊತೆಗೆ ಮನುಷ್ಯರಾದವರು ಸದಾ ತ್ಯಾಗದಲ್ಲಿ ತೊಡಗಿರಬೇಕು, ದಯಾ-ಕರುಣೆಯಿಂದ ಬಾಳಿದರೆ ಅದುವೇ ಸ್ವರ್ಗ. ಕೆಲವು ದಿನಗಳ ಹಿಂದೆ ದೇಶದಲ್ಲಿ ಭೇದ- ಭಾವ ಹರಡುವ ವಾತಾವರಣ ಇತ್ತು,ಈ ರೀತಿಯ ಬೆಳವಣಿಗೆಗೆ ಅವಕಾಶ ಕೊಡದೇ ಪ್ರತಿಯೊಬ್ಬರೂ ಸಹೋದರರಂತೆ ಜೀವಿಸಬೇಕೆಂದರು ಕರೆ ನೀಡಿದರು.

Srirangapatna Tourism: ವಿದೇಶಿ ಮಾದರಿ ಶ್ರೀರಂಗಪಟ್ಟಣ ಅಭಿವೃದ್ಧಿಗೆ ಚಿಂತನೆ

ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಧರ್ಮ ಧರಗಳ ನಡುವೆ ಗಲಭೆಗಳಾಗುತ್ತಿರುವ ಈ ಸಂದರ್ಭದಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ ಹಿರೇವಂಕಲಕುಂಟಾದ ಜುಮ್ಮಾ ಮಸೀದಿಗೆ ಭೇಟಿ‌ ನೀಡುವ ಮೂಲಕ ಸೌಹಾರ್ಧತೆ ಮೆರೆದಿರುವುದು ನಿಜಕ್ಕೂ ಅನುಕರಣಿಯವೇ ಸರಿ.

click me!