ದೇವರಾಜ ಅರಸು ಎಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಿ| ಅವರ ತತ್ವ ಸಿದ್ದಾಂತಗಳು ಉನ್ನತ ಮಟ್ಟದ್ದಾಗಿದ್ದವು|ಸ ದೇವರಾಜ ಅರಸರಿಗೆ ಯಾರು ಸರಿಸಮಾನರಲ್ಲ ಎಂದ ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ| ಜೆಡಿಎಸ್ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಮರೇಗೌಡ ಬಯ್ಯಾಪೂರ|
ಕೊಪ್ಪಳ(ನ.15): ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಎಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಿ. ಅವರ ತತ್ವ ಸಿದ್ದಾಂತಗಳು ಉನ್ನತ ಮಟ್ಟದ್ದಾಗಿದ್ದವು. ದೇವರಾಜ ಅರಸರಿಗೆ ಯಾರು ಸರಿಸಮಾನರಲ್ಲ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪೂರ ಅವರು ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಜೆಡಿಎಸ್ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಳ್ಳಿ ಹಕ್ಕಿ ಕಾಡು ಸೇರುತ್ತೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಚ್ ವಿಶ್ವನಾಥ್ ವಿರುದ್ಧ ವ್ಯಂಗ್ಯವಾಡಿದ್ದರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹೆಚ್ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ದೇವಾರಾಜ ಅರಸು ಅವರನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೋಲಿಕೆ ಮಾಡಿದ್ದರು. ಈ ಹೇಳಿಕೆ ಹೆಚ್.ವಿಶ್ವನಾಥ ವಿರುದ್ದ ಬಯ್ಯಾಪೂರ ಪರೋಕ್ಷವಾಗಿ ಕಿಡಿ ಕಾರಿದ್ದಾರೆ.
ಅನರ್ಹ ಶಾಸಕರ ಸಂಬಂಧ ಸುಪ್ರೀಂಕೋರ್ಟ್ ನೀಡಿದ ತೀರ್ಮಾನ ಸರಿಯಾಗಿದೆ. ಮುಂದಿನ ದಿನಮಾನಗಳಲ್ಲಿ ಪಕ್ಷಾಂತರ ಕಾಯ್ದೆ ಬದಲಾವಣೆ ಮಾಡಬೇಕಿದೆ. ಹೀಗೆ ಮುಂದುವರೆದ್ರೆ ಮುಂದಿನ ದಿನದಲ್ಲಿ ಯಾವ ಪಕ್ಷಗಳಿಗೆ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ. ಹಿಂದಿನ ಸಮ್ಮಿಶ್ರ ಸರ್ಕಾರಕ್ಕಿಂತಲು ಒಂದು ಹೆಜ್ಜೆ ಮುಂದೆ ಹೋಗಿ ತಾರತಮ್ಯ ಮಾಡುತ್ತಿದೆ. ನನ್ನ ಕ್ಷೇತ್ರಕ್ಕೆ ಒಂದು ನಯಾ ಪೈಸೆ ಕೂಡ ನೀಡಿಲ್ಲ. ಈ ಉಪ ಚುನಾವಣೆಯಲ್ಲಿ ಅನರ್ಹರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಈ ಚುನಾವಣಾ ರಾಜ್ಯ ರಾಜ ಕಾರಣಕ್ಕೆ ದಿಕ್ಸೂಚಿಯಾಗಲಿದೆ ಎಂದು ಹೇಳಿದ್ದಾರೆ.