ಹಳೇ ಆಚಾರಗಳಿಗೆ ಹಲವು ವಿಚಾರಗಳಿರುತ್ತವೆ. ಹೆಣ್ಣು ಧರಿಸುವ ಕಾಲುಂಗರವೂ ಆರೋಗ್ಯದ ದೃಷ್ಟಿಯಿಂದ ಉಪಕಾರಿ. ಫ್ಯಾಷನ್ ಜತೆಗೆ ಹಲವು ಪ್ರಯೋಜನಗಳಿರುವ ಈ ಉಂಗುರದ ಮಹತ್ವಗಳೇನು?
'ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ...' ಎನ್ನುತ್ತಾರೆ. ಕಾಲುಂಗುರ ಎಂಬುದು ಮುತ್ತೈದೆಯ ಬಹು ಮುಖ್ಯ ಆಭರಣ. ಆದರೆ ಇದು ಕೇವಲ ಸಂಪ್ರಾದಾಯ ಮಾತ್ರವಲ್ಲ, ಇದು ಆರೋಗ್ಯಕ್ಕೂ ಉತ್ತಮ.
ಭೂಮಿಯಿಂದ ಧ್ರುವೀಯ ಶಕ್ತಿಯನ್ನು ಹೀರಿಕೊಂಡು ದೇಹದಲ್ಲಿ ಹಾದು ಹೋಗಲು ಬೆಳ್ಳಿ ನೆರವಾಗುತ್ತದೆ. ದೇಹದಲ್ಲಿ ಇದು ಅನೇಕ ಬದಲಾವಣೆಗಳನ್ನು ತರುತ್ತದೆ.
ಕಾಲುಂಗುರ ಹಾಕುವ ಎರಡನೇ ಬೆರಳಿನಲ್ಲಿ ಪ್ರೆಷರ್ ಪಾಯಿಂಟ್ ಇದೆ. ಈ ಬೆರಳಿಗೆ ಬೆಳ್ಳಿ ಕಾಲುಂಗುರವನ್ನು ಧರಿಸುವುದರಿಂದ ಮಹಿಳೆಯರ ಋತುಚಕ್ರ ಸಮಸ್ಯೆ ತಡೆಯಬಹುದು. ಇದರಿಂದ ಪಿರಿಯಡ್ಸ್ ಸರಿಯಾಗಿ ಆಗುತ್ತದೆ.
ಕಾಲುಂಗುರ ಹಾಕುವುದರಿಂದ ರಕ್ತ ಸಂಚಾರ ಸಮಪರ್ಕಗೊಂಡು, ಗರ್ಭಕೋಶವನ್ನು ಆರೋಗ್ಯವಾಗಿಡಬಹುದು.
ಕಾಲಿನ ಕೆಲವು ನರಗಳು ಉತ್ತೇಜನಗೊಳ್ಳುತ್ತದೆ. ಇದರಿಂದ ಸಂತಾನೋತ್ಪತ್ತಿಯೂ ಚೆನ್ನಾಗಿರುತ್ತದೆ.
ಕಾಲುಂಗುರದಿಂದ ಬೆರಳಿನ ಮೇಲೆ ಒತ್ತಡ ಉಂಟಾಗುತ್ತದೆ. ಇದರಿಂದ ಅಲ್ಲಿರುವ ನರದ ಮೇಲೆ ಪ್ರೆಷರ್ ಬಿದ್ದು, ದೇಹಕ್ಕೆ ಮಸಾಜ್ ಸಿಕ್ಕಿಂತಾಗುತ್ತದೆ. ಇದು ಹಲವು ಸ್ತ್ರೀ ಸಂಬಂಧಿ ರೋಗಗಳಿಗೂ ರಾಮಬಾಣ.
ದೇಹದ ಎಲ್ಲಾ ಅಂಗಾಗಳನ್ನೂ ರಿಫ್ರೆಶ್ ಆಗಲು ಕಾಲುಂಗುರ ಧರಿಸುವುದು ಉತ್ತಮ.
ಕಾಲುಂಗುರ ಧರಿಸುವುದರಿಂದ ಮಹಿಳೆಯ ಹೊಟ್ಟೆಯಲ್ಲಿರುವ ಮಗುವೂ ಆರೋಗ್ಯವಾಗಿ ಬೆಳವಣಿಗೆಯಾಗುತ್ತದೆ.
ಕಾಲುಂಗುರ ನಕರಾತ್ಮಕತೆ ನಿವಾರಿಸುತ್ತದೆ. ಇದು ಗರ್ಭಿಣಿಯರು ಮಾನಸಿಕವಾಗಿ ಆರೋಗ್ಯದಿಂದಿರಲು ಸಹಕರಿಸುತ್ತೆ.
ಬೆಳ್ಳಿ ವಸ್ತು ದೇಹವನ್ನು ತಂಪಾಗಿರಿಸುತ್ತವೆ. ಇದನ್ನು ಧರಿಸುವುದರಿಂದ ಪೊಸಿಟಿವ್ ಎನರ್ಜಿ ದೇಹದಲ್ಲಿ ಸಂಚಾರವಾಗುತ್ತದೆ.
ಬ್ಲಡ್ ಪ್ರೆಶರ್ ಸಮಸ್ಯೆ ನಿರಾಳವಾಗಲು ಬೆಳ್ಳಿ ಕಾಲುಂಗುರ ನೆರವಾಗುತ್ತದೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.