ಸೋಷಿಯಲ್ ಮೀಡಿಯಾ ಬಳಕೆಯಿಂದ ಮಕ್ಕಳ ನಿದ್ದೆ ಕಡಿಮೆ

By Suvarna Web DeskFirst Published Jan 24, 2018, 4:57 PM IST
Highlights

ಇತ್ತೀಚಿನ ದಿನಗಳಲ್ಲಿ ಮಕ್ಕಳಾದಿಯಾಗಿ, ವೃದ್ಧರವರೆಗೂ ಮೊಬೈಲ್ ಬಳಕೆ, ಸೋಷಿಯಲ್ ಮೀಡಿಯಾ ಬಳಕೆ ಹೆಚ್ಚಾಗಿದೆ. ಒಂದು ಅಧ್ಯಯನದ ಪ್ರಕಾರ, ಅತಿಯಾದ ಸೋಷಿಯಲ್ ಮೀಡಿಯಾ ಬಳಕೆ ಮಕ್ಕಳಲ್ಲಿ ನಿದ್ದೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಬೆಂಗಳೂರು (ಜ.24): ಇತ್ತೀಚಿನ ದಿನಗಳಲ್ಲಿ ಮಕ್ಕಳಾದಿಯಾಗಿ, ವೃದ್ಧರವರೆಗೂ ಮೊಬೈಲ್ ಬಳಕೆ, ಸೋಷಿಯಲ್ ಮೀಡಿಯಾ ಬಳಕೆ ಹೆಚ್ಚಾಗಿದೆ. ಒಂದು ಅಧ್ಯಯನದ ಪ್ರಕಾರ, ಅತಿಯಾದ ಸೋಷಿಯಲ್ ಮೀಡಿಯಾ ಬಳಕೆ ಮಕ್ಕಳಲ್ಲಿ ನಿದ್ದೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

5242 ಮಕ್ಕಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅದರಲ್ಲಿ ಶೇ. 63 ರಷ್ಟು ಮಂದಿ ಕಡಿಮೆ ನಿದ್ದೆ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಶೇ. 73. 4 ರಷ್ಟು ವಿದ್ಯಾರ್ಥಿಗಳು ದಿನಕ್ಕೆ ಒಂದು ತಾಸು ಸೋಷಿಯಲ್ ಮೀಡಿಯಾದಲ್ಲಿ ಕಳೆಯುವುದಾಗಿ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್, ಸೋಷಿಯಲ್ ಮೀಡಿಯಾ ಬಳಕೆ ಹೆಚ್ಚಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ನಿದ್ದೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಅದರಲ್ಲೂ ರಾತ್ರಿ ಹೊತ್ತು ಮೊಬೈಲ್ ಬಳಸುವುದು ಒಳ್ಳೆಯದಲ್ಲ ಎಂದು ಅಧ್ಯಯನ ಹೇಳಿದೆ.

click me!