
ನವದೆಹಲಿ[ಸೆ.26]: ಇತ್ತೀಚಿನ ದಿನಗಳಲ್ಲಿ ಜನರು ಎಲ್ಲೆಂದರಲ್ಲಿ ಮೊಬೈಲ್ ಬಳಸುವುದು ಸಾಮಾನ್ಯ ಸಂಗತಿ. ಕೆಲವರಂತೂ ಮೊಬೈಲ್‌ನಲ್ಲಿ ಚಾಟಿಂಗ್ ಮಾಡುತ್ತಾ ಟಾಯ್ಲೆಟ್‌ನಲ್ಲಿ ಕೂರುತ್ತಾರೆ.
ನೀವು ಸಹ ಟೈಮ್ ಪಾಸ್‌ಗೆಂದು ಟಾಯ್ಲೆಟ್‌ನಲ್ಲಿ ಮೊಬೈಲ್ ನೋಡುವ ಹವ್ಯಾಸ ಬೆಳೆಸಿಕೊಂಡಿದ್ದರೆ ಎಚ್ಚರ. ಮಲ ವಿಸರ್ಜನೆಯ ವೇಳೆ ಮೊಬೈಲ್ ವೀಕ್ಷಣೆಯಿಂದ ಮೂಲವ್ಯಾಧಿ ಕಾಯಿಲೆ ಕಾಣಿಸಿಕೊಳ್ಳಬಹುದು ಎಂದು ಬ್ರಿಟನ್ ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಯುಗೌ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯ ವೇಳೆ ಬ್ರಿಟನ್ನಿನ ಶೇ.57ರಷ್ಟುಮಂದಿ ತಾವು ಟಾಯ್ಲೆಟ್‌ನಲ್ಲಿ ಮೊಬೈಲ್ ಬಳಸುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಟಾಯ್ಲೆಟ್‌ನಲ್ಲಿ ಮೊಬೈಲ್ ಬಳಕೆಯನ್ನು ಆದಷ್ಟುಕಡಿಮೆ ಮಾಡಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.