
ಭೋಪಾಲ್(ಏ.06): 1989ರಿಂದಲೂ ಬಿಜೆಪಿಯ ಭದ್ರ ಕೋಟೆ ಎಂದೇ ಬಿಂಬಿತವಾಗಿರುವ ಭೋಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಅಖಾಡಕ್ಕೆ ಧುಮುಕಿರುವ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವಿರುದ್ಧ ಎಲ್.ಕೆ. ಅಡ್ವಾಣಿ ಅವರ ಪುತ್ರಿ ಪ್ರತಿಭಾ ಅಡ್ವಾಣಿ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ.
ಅಡ್ವಾಣಿ, ಜೋಶಿಗೆ ಟಿಕೆಟ್ ತಪ್ಪಲು ಕಾರಣವೇನು? ಬಹಿರಂಗಪಡಿಸಿದ ಶಾ!
ಗಾಂಧೀನಗರ ಕ್ಷೇತ್ರದಿಂದ ಸ್ಪರ್ಧಿಸಲು ಅಡ್ವಾಣಿ ನಿರಾಕರಿಸಿದ ಬೆನ್ನಲ್ಲೇ ಅವರ ಪುತ್ರಿ ಪ್ರತಿಭಾಗೆ ಟಿಕೆಟ್ ನೀಡುವ ಆಫರ್ ಅನ್ನು ಪಕ್ಷ ನೀಡಿತ್ತು. ಆದರೆ ಸ್ವತಃ ಅಡ್ವಾಣಿ ಅದನ್ನು ತಿರಸ್ಕರಿಸಿದ್ದರು ಎನ್ನಲಾಗಿತ್ತು.
ಅದರ ಬೆನ್ನಲ್ಲೇ ಇದೀಗ ಪ್ರತಿಭಾ ಅವರನ್ನು ಮಧ್ಯಪ್ರದೇಶದ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ವಿರುದ್ಧ ಕಣಕ್ಕೆ ಇಳಿಸಲು ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...