ಜೆಡಿಎಸ್ ಭದ್ರಕೋಟೆಯಲ್ಲಿ ಮೂವರು ಮುಖಂಡರನ್ನು ಉಚ್ಛಾಟಿಸಲಾಗಿದೆ. ಮಾಜಿ ಸಚಿವರೋರ್ವರ ಶಿಫಾರಸಿನ ಮೇಲೆ ಉಚ್ಛಾಟನೆ ಮಾಡಲಾಗಿದೆ.
ಮದ್ದೂರು (ಅ.14): ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಸಿ.ಕೆ. ಸ್ವಾಮಿಗೌಡ ಸೇರಿದಂತೆ ಮೂವರು ತಾಲೂಕು ಪದಾಧಿಕಾರಿಗಳನ್ನು ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಿ.ಕೆ. ಸ್ವಾಮಿಗೌಡ ಚಾಮನಹಳ್ಳಿ, ಮದ್ದೂರು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಿ.ಟಿ.ಶಂಕರ್, ಪ್ರಧಾನ ಕಾರ್ಯದರ್ಶಿ ಹಾಗಲಹಳ್ಳಿ ಎಸ್.ಡಿ. ರಘು ಅವರನ್ನು ಶಾಸಕ ಡಿ.ಸಿ. ತಮ್ಮಣ್ಣ ಅವರ ಶಿಫಾರಸ್ಸಿನ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ತಿಳಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.